ಚಿಕ್ಕಮಗಳೂರು : ಮನುಷ್ಯ ಎಷ್ಟು ಕಿಳು ಮಟ್ಟಕ್ಕೆ ಇಳಿದಿದ್ದಾನೆ ಎಂದರೆ ಇಷ್ಟು ದಿನ ಬಾಲಕಿಯರು, ಯುವತಿಯರು, ಮಹಿಳೆಯರು ಹಾಗೂ ವೃದ್ಧೆಯರ ಮೇಲು ಸಹ ಅತ್ಯಾಚಾರ ಎಸಗಲಾಗುತ್ತಿತ್ತು. ಇದೀಗ ಚಿಕ್ಕಮಂಗಳೂರಲ್ಲಿ ಬೆಚ್ಚಿಬಿಳಿಸುವಂತಹ ಘಟನೆ ನಡೆದಿದ್ದು ನಾಯಿಯ ಮೇಲೆ ಕಾಮುಕನೊಬ್ಬ ಅಸಭ್ಯವಾಗಿ ವರ್ತಿಸಿ ಅತ್ಯಾಚಾರಕ್ಕೆ ಯತ್ನಿಸಿರುವ ಘಟನೆ ನಡೆದಿದೆ.
ಹೌದು ಅಕ್ಟೋಬರ್ 18 ರಂದು ಜಯಪುರ ಬಸ್ನಿಲ್ದಾಣದಲ್ಲಿ ವ್ಯಕ್ತಿಯ ಕೃತ್ಯ ಸೆರೆಯಾಗಿದೆ. ಕೊಪ್ಪ ತಾಲೂಕಿನ ಜಯಪುರ ಎಂಬಲ್ಲಿ ಈ ಒಂದು ಕೃತ್ಯ ನಡೆದಿದೆ ಇನ್ನೂ ನ್ಯಾಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಆರೋಪಿಯನ್ನು ಶಿವರಾಜ್ ಎಂದು ಗುರುತಿಸಲಾಗಿದೆ. ಇದೀಗ ಶಿವರಾಜ್ ಎಂಬ ವ್ಯಕ್ತಿಯ ವಿರುದ್ಧ ಜಯಪುರ ಠಾಣೆ ಪೊಲೀಸರು ಸುಮೋಟೋ ಕೇಸ್ ದಾಖಲಿಸಿಕೊಂಡಿದ್ದಾರೆ.
ಆರೋಪಿ ಬೆಳಗ್ಗಿನ ಜಾವ 4 ಗಂಟೆ ವೇಳೆಗೆ ಕೃತ್ಯ ಎಸಗಿರುವುದು ಕಂಡುಬಂದಿದೆ. ಅಂಗಡಿಯ ಮುಂಭಾಗದ ಕಟ್ಟೆಯ ಮೇಲೆ ಕುಳಿತುಕೊಂಡ ವ್ಯಕ್ತಿ ಬೀದಿ ನಾಯಿಯನ್ನು ಹಿಡಿದುಕೊಂಡು ಆದರೊಂದಿಗೆ ಅಸಭ್ಯವಾಗಿ ವರ್ತಿಸಿದ್ದಾನೆ.ಈ ಕೃತ್ಯದ ಬಗ್ಗೆ ನವೆಂಬರ್ 9 ರಂದು ಬೆಳಕಿಗೆ ಬಂದಿದೆ. ಸಿಸಿಟಿವಿ ದೃಶ್ಯಗಳನ್ನು ಪರಿಶೀಲಿಸಿದ್ದು, ಪೊಲೀಸ್ ಕಾನ್ಸ್ಟೇಬಲ್ ದೂರು ನೀಡಿದ್ದಾರೆ.