ಕಲಬುರ್ಗಿ : ಕಲ್ಬುರ್ಗಿಯಲ್ಲಿ ಘೋರ ದುರಂತ ಒಂದು ಸಂಭವಿಸಿದ್ದು, 7ನೇ ತರಗತಿ ವಿದ್ಯಾರ್ಥಿ ಒಬ್ಬ ವಸತಿ ಶಾಲೆಯ ಕೊಠಡಿಯಲ್ಲೆ ಫ್ಯಾನ್ ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕಲಬುರ್ಗಿ ಜಿಲ್ಲೆಯ ಸೇಡಂ ಪಟ್ಟಣದಲ್ಲಿ ನಡೆದಿದೆ.
ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿಯನ್ನು ನಾರಾಯಣ ಪಾಳ (13) ಎಂದು ತಿಳಿದುಬಂದಿದೆ. ಕಲಬುರ್ಗಿ ಜಿಲ್ಲೆಯ ಸೇಡಂ ತಾಲೂಕಿನಲ್ಲಿರುವ ಇಂದಿರಾ ಗಾಂಧಿ ಬಾಲಕರ ವಸತಿ ಶಾಲೆಯಲ್ಲಿ ಈ ಘಟನೆ ನಡೆದಿದೆ. ವಿದ್ಯಾರ್ಥಿ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ ಸ್ಥಳಕ್ಕೆ ಮುಧೋಳ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.