ವಿಜಯಪುರ : ವಿಜಯಪುರದಲ್ಲಿ ಇಂದು ಬೆಚ್ಚಿ ಬೀಳಿಸೋ ಘಟನೆ ಒಂದು ಸಂಭವಿಸಿದ್ದು, ಸಮಾಜ ಕಲ್ಯಾಣ ಇಲಾಖೆಯ ಮಹಿಳಾ ಅಧಿಕಾರಿಗೆ ದುಷ್ಕರ್ಮಿಗಳು ಚಾಕುವಿನಿಂದ ಇರಿದು ಹತ್ಯೆಗೆ ಯತ್ನಿಸಿರುವ ಘಟನೆ ವಿಜಯಪುರ ಜಿಲ್ಲೆಯ ಇಂಡಿ ಪಟ್ಟಣದ ಟಿಪ್ಪು ಸುಲ್ತಾನ್ ವೃತ್ತದಲ್ಲಿ ನಡೆದಿದೆ.
ಹೌದು ಚಾಕುವಿನಿಂದ ಇರಿದು ಮಹಿಳಾ ಅಧಿಕಾರಿ ಹತ್ಯೆಗೆ ಯತ್ನಿಸಲಾಗಿದ್ದು, ವಿಜಯಪುರ ಜಿಲ್ಲೆಯ ಇಂಡಿ ಪಟ್ಟಣದ ಟಿಪ್ಪು ಸುಲ್ತಾನ ವೃತ್ತದಲ್ಲಿ ಈ ಒಂದು ಘಟನೆ ನಡೆದಿದೆ. ಚಾಕುವಿನಿಂದ ಹಿಡಿದು ರೇಣುಕಾ ಸಾಯಬಣ್ಣ ಕನ್ನೊಳ್ಳಿ (30) ಎನ್ನುವ ಮಹಿಳಾ ಅಧಿಕಾರಿಯ ಹತ್ಯೆಗೆ ಯತ್ನಿಸಲಾಗಿದೆ. ರೇಣುಕಾ ಕನ್ನೊಳ್ಳಿ ಇಂಡಿ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಯಾಗಿದ್ದಾರೆ.
ರೇಣುಕಾ ಬೈಕ್ನಲ್ಲಿ ತೆರಳುತ್ತಿದ್ದ ವೇಳೆ ದುಷ್ಕರ್ಮಿಗಳು ಚಾಕುವಿನಿಂದ ಇರಿದು ಕೊಲೆಗೆ ಯತ್ನಿಸಿದ್ದಾರೆ. ಹಲ್ಲಿಗೆ ಒಳಗಾದಂತಹ ರೇಣುಕಾ ಇಂಡಿ ತಾಲೂಕಿನ ಕೋಟ್ನಾಳ ನಿವಾಸಿ ಎನ್ನಲಾಗಿದೆ. ಗಂಭೀರವಾಗಿ ಗಾಯಗೊಂಡ ರೇಣುಕಾ ಅವರನ್ನು ತಕ್ಷಣ ವಿಜಯಪುರ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನಾ ಸ್ಥಳಕ್ಕೆ ಇಂಡಿ ಪಟ್ಟಣ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.