ಹಾಸನ : ರಾಜ್ಯದಲ್ಲಿ ಮತ್ತೊಂದು ಬೆಚ್ಚಿ ಬೀಳಿಸೋ ಕೃತ್ಯ ನಡೆದಿದ್ದು, ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಪುತ್ರನೇ ತಂದೆಯನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ.
ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಹಿರಿಸಾವೆ ಗ್ರಾಮದಲ್ಲಿ ಪುತ್ರನೇ ತಂದೆಯನ್ನು ರಾಡ್ ನಿಂದ ಬರ್ಬರವಾಗಿ ಹತ್ಯೆ ಮಾಡಿದ್ದಾನೆ. ರಾಡ್ ನಿಂದ ಹೊಡೆದು ಸತೀಶ್ (60) ಕೊಲೆಗೈದ ಪುತ್ರ ರಂಜಿತ್.
ಕೌಟುಂಬಿಕ ಕಲಹದಿಂದ ಕೆ.ಆರ್.ನಗರದಲ್ಲಿ ಪ್ರತ್ಯೇಕವಾಗಿ ವಾಸವಿದ್ದ ತಾಯಿ,ಮಗ, ಇದೇ ವಿಚಾರಕ್ಕೆ ತಂದೆಯ ಜೊತೆಗೆ ಆಗಾಗ ಜಗಳ ನಡೆಯುತ್ತಿತ್ತು. ನಿನ್ನೆ ಸಂಜೆ ಕೂಡ ಜಗಳವಾಗಿದ್ದು, ಈ ವೇಳೆ ಸ್ಟೀಲ್ ರಾಡ್ ನಿಂದ ತಂದೆ ತಲೆಗೆ ಹೊಡೆದು ಕೊಲೆ ಮಾಡಿದ್ದಾನೆ. ಹಿರಿಸಾವೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.








