BREAKING : ಜೆರುಸಲೆಮ್ ನಲ್ಲಿ ಗುಂಡಿನ ದಾಳಿ : ನಾಲ್ವರು ಸಾವು, 5 ಮಂದಿ ಗಂಭೀರ.!

ಜೆರುಸಲೆಮ್ : ಜೆರುಸಲೆಮ್ ನಲ್ಲಿ ನಡೆದ ಗುಂಡಿನ ದಾಳಿಯಲ್ಲಿ 4 ಮಂದಿ ಸಾವು, 5 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಜೆರುಸಲೆಮ್ ಹೊರವಲಯದಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಕನಿಷ್ಠ 15 ಜನರು ಗಾಯಗೊಂಡಿದ್ದು, ನಾಲ್ವರು ಮೃತಪಟ್ಟಿದ್ದಾರೆ. ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಇಸ್ರೇಲಿ ಪೊಲೀಸರು ಇದನ್ನು ಭಯೋತ್ಪಾದಕ ದಾಳಿ ಎಂದು ಹೇಳಿದ್ದಾರೆ. ದುಷ್ಕರ್ಮಿಗಳನ್ನು ಹತ್ಯೆ ಮಾಡಲಾಗಿದೆ ಎಂದು ಇಸ್ರೇಲಿ ಪೊಲೀಸರು ತಿಳಿಸಿದ್ದಾರೆ. ಇಸ್ರೇಲಿ ಪೊಲೀಸರು 2 ಶಂಕಿತ ಭಯೋತ್ಪಾದಕರ ಹತ್ಯೆ ಮಾಡಿದ್ದಾರೆ.