ರಾಯಚೂರು : ತಡರಾತ್ರಿ ರಾಯಚೂರಿನಲ್ಲಿ ಭೀಕರವಾದ ಅಗ್ನಿ ಅವಘಡ ಸಂಭವಿಸಿದ್ದು ಶಾರ್ಟ್ ಸರ್ಕ್ಯೂಟ್ ನಿಂದ ಒಟ್ಟು ಏಳು ಅಂಗಡಿಗಳು ಸಂಪೂರ್ಣವಾಗಿ ಬೆಂಕಿಗೆ ಆಹುತಿಯಾಗಿವೆ. ಈ ಒಂದು ಅಗ್ನಿ ಅವಗಡದಲ್ಲಿ ಲಕ್ಷಾಂತರ ರೂಪಾಯಿ ವಸ್ತುಗಳು ಸುಟ್ಟು ಬಸ್ಮವಾಗಿದ್ದು ಆದರೆ ಯಾವುದೇ ಸಾವು ನೋವು ಸಂಭವಿಸಿಲ್ಲ ಎಂದು ತಿಳಿದು ಬಂದಿದೆ.
ರಾಯಚೂರು ಜಿಲ್ಲೆಯ ಸಿಂಧನೂರಿನಲ್ಲಿ ಕನಕದಾಸ ವೃತ್ತದ ಬಳಿ ಬರುವ 7 ಅಂಗಡಿಗಳಿಗೆ ಬೆಂಕಿ ಹತ್ತಿಕೊಂಡು ಅಂಗಡಿಗಳು ಭಸ್ಮವಾಗಿವೆ. ಮೊಬೈಲ್ ಅಂಗಡಿ, ಬಟ್ಟೆ ಅಂಗಡಿ, ಚಿಕ್ಕನ್ ಶಾಪ್, ಜನರಲ್ ಸ್ಟೋರ್, ಹಗ್ಗ ಮಾರಾಟ ಕೇಂದ್ರ ಸೇರಿದಂತೆ ಒಟ್ಟು 7 ಅಂಗಡಿಗಳಿಗೆ ಬೆಂಕಿ ಹತ್ತಿದೆ. ಪ್ರಾಥಮಿಕವಾಗಿ ಶಾರ್ಟ್ ಸರ್ಕ್ಯೂಟ್ನಿಂದ ಬೆಂಕಿ ಹತ್ತಿಕೊಂಡಿದೆ ಎಂದು ತಿಳಿದು ಬಂದಿದೆ.
ಸಿಂಧನೂರು ನಗರ ಠಾಣೆ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ. ನಿನ್ನೆ ತಡರಾತ್ರಿ ಘಟನೆ ನಡೆದಿದ್ದು, ಮೊದಲಿಗೆ ಒಂದು ಅಂಗಡಿಗೆ ಬೆಂಕಿ ಹತ್ತಿ ಬಳಿಕ ಒಂದರಿಂದ ಒಂದು ಅಂಗಡಿಗೆ ಬೆಂಕಿ ಹೊತ್ತಿಕೊಂಡಿದೆ. ಘಟನೆ ಬಗ್ಗೆ ಅಂಗಡಿ ಮಾಲೀಕರು ದೂರು ನೀಡಿದ ಆಧಾರದಲ್ಲಿ ತನಿಖೆ ನಡೆಸಲಾಗುತ್ತಿದೆ. ಈ ಅಂಗಡಿಗಳು ಎಲ್ಲ ಟಿನ್ ಶೆಡ್‌ನಲ್ಲಿದ್ದು, ಯಾವುದೇ ಜೀವಹಾನಿ ಸಂಭವಿಸಿಲ್ಲವೆಂದು ಪೊಲೀಸರು ತಿಳಿಸಿದ್ದಾರೆ.








