ಬೆಂಗಳೂರು : ಕಳೆದ ಕೆಲವು ದಿನಗಳಿಂದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹಾಗೂ ರಾಜ್ಯ ಅಧ್ಯಕ್ಷ ಬಿ ವೈ ವಿಜಯೇಂದ್ರರ ನಡುವೆ ಬಣ ಬಡಿದಾಟ ತೀವ್ರ ತಾರಕಕ್ಕೆ ಏರಿತ್ತು. ಇದೀಗ ರಾಜ್ಯ ಬಿಜೆಪಿ ನಾಯಕತ್ವದ ವಿರುದ್ಧ ನಿಲುವು ಹೊಂದಿದ್ದ ಹಿನ್ನೆಲೆಯಲ್ಲಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಗೆ ಬಿಜೆಪಿಯ ಕೇಂದ್ರೀಯ ಶಿಸ್ತು ಸಮಿತಿಯು ಶೋಕಾಶ್ ನೋಟಿಸ್ ಜಾರಿ ಮಾಡಿದೆ.
ಹೌದು ಬಿಜೆಪಿ ಶಾಸಕ ಬಸನಗೌಡ ಪಾಟೀಲರಿಗೆ ನೋಟಿಸ್ ಬಿಜೆಪಿ ಕೇಂದ್ರೀಯ ಶಿಸ್ತು ಸಮಿತಿಯಿಂದ ಶೋಕಾಸ್ ನೋಟಿಸ್ ಜಾರಿ ಮಾಡಲಾಗಿದೆ. ಹತ್ತು ದಿನದ ಒಳಗೆ ಉತ್ತರ ನೀಡುವಂತೆ ಯತ್ನಾಳಗೆ ನೋಟಿಸ್ ನೀಡಿದೆ. ರಾಜ್ಯ ಬಿಜೆಪಿ ನಾಯಕತ್ವದ ವಿರುದ್ಧ ನಿಲುವು ಹೊಂದಿದ ಹಿನ್ನೆಲೆಯಲ್ಲಿ ನೋಟಿಸ್ ನೀಡಲಾಗಿದೆ. 10 ದಿನದೊಳಗೆ ಕಾರಣ ಕೊಡಿ ಎಂದು ಯತ್ನಾಳ್ ಗೆ ನೋಟಿಸ್ ಜಾರಿ ಮಾಡಲಾಗಿದೆ.
ಕಳೆದ ಎರಡು ದಿನಗಳ ಹಿಂದೆ ಮೈಸೂರಿನಲ್ಲಿ ಬಿವೈ ವಿಜಯೇಂದ್ರ ಆಪ್ತರು ನಡೆಸಿದ ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಕಾರ್ಯಕರ್ತರು ಯತ್ನಾಳ್ ನಿಂದ ಏನು ಉಪಯೋಗ ಇಲ್ಲ. ಆತನಿಗೆ ಉಗಿದು ಪಕ್ಷದಿಂದ ಉಚ್ಚಾಟನೆ ಮಾಡಿ ಬಿಸಾಕಿ ಎಂದು ಏಕವಚನದಲ್ಲಿ ಕಿಡಿ ಕಾರಿದ್ದರು. ಇದರ ಬೆನ್ನಲ್ಲೇ ನಿನ್ನೆ ಬೆಂಗಳೂರಿನಲ್ಲಿರುವ ಡಾಲರ್ಸ್ ಕಾಲೋನಿಯಲ್ಲಿ ಬಿಎಸ್ ಯಡಿಯೂರಪ್ಪ ಮನೆಗೆ ಮಾಜಿ ಶಾಸಕರು ಭೇಟಿ ನೀಡಿ ಯತ್ನಾಳ ಉಚ್ಚಾಟನೆಗೆ ಆಗ್ರಹಿಸಿದ್ದರು.
ಇದೆ ವಿಚಾರವಾಗಿ ಯತ್ನಾಳ್ ಅವರು ನನ್ನ ವಿರುದ್ಧ ಯಾವುದೇ ಕ್ರಮ ಕೈಗೊಂಡರು ನನ್ನ ತಕರಾರು ಇಲ್ಲ. ಏನು ಬೇಕಾದರೂ ಕ್ರಮ ತೆಗೆದುಕೊಳ್ಳಬಹುದು ಎಂದು ತಿರುಗೇಟು ನೀಡಿದರು. ಇದರ ಬೆನ್ನಲ್ಲೇ ಅವರು ನಿನ್ನೆ ದೆಹಲಿಗೆ ತೆರಳಿದ್ದಾರೆ. ಇದೀಗ ಕೇಂದ್ರೀಯ ಶಿಸ್ತು ಸಮಿತಿಯು 10 ದಿನದ ಒಳಗಾಗಿ ಕಾರಣ ನೀಡಿ ಎಂದು ಶೋಕಾಸ್ ನೋಟಿಸ್ ನೀಡಿದೆ ಎಂದು ತಿಳಿದುಬಂದಿದೆ.