ಉತ್ತರಪ್ರದೇಶ : ಉತ್ತರ ಪ್ರದೇಶದ ಫತೆಪುರದಲ್ಲಿರುವ ಶ್ರೀ ಕೃಷ್ಣ ಜನ್ಮ ಭೂಮಿ ಹಾಗೂ ಶಾಹಿ ಈದ್ಗ ಮಸೀದಿ ಭೂ ವಿವಾದ ಪ್ರಕರಣಕ್ಕೆ ಸಂಬಂಧಿಸಿದಂತೆ, ಶ್ರೀಕೃಷ್ಣ ಜನ್ಮಭೂಮಿ ಟ್ರಸ್ಟ್ ಅಧ್ಯಕ್ಷರಿಗೆ ವಾಟ್ಸಾಪ್ ಕರೆ ಮಾಡಿದ ವ್ಯಕ್ತಿ ತನ್ನನ್ನು ಪಾಕಿಸ್ತಾನದ ಭಯೋತ್ಪಾದಕ ಸಂಘಟನೆ ಎಂದು ಹೇಳಿಕೊಂಡಿದ್ದಾನೆ.
ಮಗಳ ಮದುವೆಯ ಸಿದ್ಧತೆಯಲ್ಲಿದ್ದ ಪೋಷಕರಿಗೆ ಅಘಾತ : ದುಬೈ ರಸ್ತೆ ಅಪಘಾತದಲ್ಲಿ ಮಂಗಳೂರಿನ ಯುವತಿ ಸಾವು
ಮಥುರಾದ ಕೃಷ್ಣ ಜನ್ಮಭೂಮಿ ಮುಕ್ತಿ ನಿರ್ಮಾಣ ಟ್ರಸ್ಟ್ನ ಅಧ್ಯಕ್ಷರಾಗಿರುವ ಶಕುಂಭರಿ ಪೀಠಾಧೀಶ್ವರದ ಅಶುತೋಷ್ ಪಾಂಡೆ ಅವರು, ಅಲಹಾಬಾದ್ ಹೈಕೋರ್ಟ್ನಲ್ಲಿ ಬಾಕಿ ಇರುವ ಶ್ರೀ ಕೃಷ್ಣ ಜನ್ಮಭೂಮಿ ವರ್ಸಸ್ ಶಾಹಿ ಮಸೀದಿ ಈದ್ಗಾದಲ್ಲಿ ಸಲ್ಲಿಸಲಾದ ಮೊಕದ್ದಮೆಗೆ ಪ್ರಮುಖ ಕಕ್ಷಿದಾರರಾಗಿದ್ದಾರೆ. ಶುಕ್ರವಾರ ಪ್ರಕರಣದ ವಿಚಾರಣೆಗಾಗಿ ಅವರು ಹೈಕೋರ್ಟ್ಗೆ ತೆರಳಿದ್ದರು. ಅಲ್ಲಿಂದ ಸಂಜೆ ಮಥುರಾಗೆ ಹೋಗುತ್ತಿದ್ದಾಗ 8 ಗಂಟೆ ಸುಮಾರಿಗೆ ಅವರ ಮೊಬೈಲ್ಗೆ ವಾಟ್ಸಾಪ್ ಕರೆ ಬಂದಿದೆ.
ಟ್ರಾಯ್ನ ಹೊಸ ನಿಯಮ: ಇನ್ಮುಂದೆ ‘ಕರೆ ಮಾಡುವವರ’ ಹೆಸರು ಮೊಬೈಲ್ ಸ್ಕ್ರೀನ್ ನಲ್ಲಿ ಪ್ರದರ್ಶಿಸಲು ಶಿಫಾರಸು
ಅನಾಮಧೇಯ ನಂಬರಿನಿಂದ ಕರೆ ಬಂದಿದ್ದು ಸ್ವೀಕರಿಸಿದಾಗ, ಪ್ರಕರಣ ಹಿಂಪಡೆಯದಿದ್ದರೆ ಬಾಂಬ್ ಸ್ಫೋಟಿಸುವುದಾಗಿ ಬೆದರಿಕೆ ಹಾಕಲಾಗಿದೆ. ಜೊತೆಗೆ ಭಾರತದ ವಿರುದ್ಧ ಘೋಷಣೆಗಳನ್ನು ಕೂಗಿದ್ದಾನೆ. ಈ ಸಂಬಂಧ ಅಶುತೋಷ್ ಅವರು ಸದರ್ ಕೊತ್ವಾಲಿಯಲ್ಲಿ ದೂರು ದಾಖಲಿಸಿದ್ದಾರೆ. ದೂರಿನನ್ವಯ ತನಿಖೆ ನಡೆಸಲಾಗುತ್ತಿದೆ ಎಂದು ಎಸ್ಎಸ್ಐ ಸಂತೋಷ್ಕುಮಾರ್ ತಿಳಿಸಿದ್ದಾರೆ. ಮೊಬೈಲ್ ಸಂಖ್ಯೆಯನ್ನು ಪರಿಶೀಲಿಸಿದ ನಂತರ ನಂಬರ್ ಎಲ್ಲಿಗೆ ಸೇರಿದೆ ಎಂಬುದು ಸ್ಪಷ್ಟವಾಗುತ್ತದೆ.
‘ಮೆಟ್ರೋ’ ಪ್ರಯಾಣಿಕರಿಗೆ ಸಿಹಿ ಸುದ್ದಿ : ‘ಮೆಜೆಸ್ಟಿಕ್- ಗರುಡಾಚಾರ್ ಪಾಳ್ಯ’ ನಡುವೆ ಹೆಚ್ಚುವರಿ ರೈಲು ಸಂಚಾರ