ಕಾಶ್ಮೀರ : ಭಾರತ ಮತ್ತು ಪಾಕಿಸ್ತಾನದ ನಡುವೆ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾದ ಹಿನ್ನೆಲೆಯಲ್ಲಿ ನಿನ್ನೆ ಎರಡು ದೇಶಗಳು ಕದನ ವಿರಾಮ ಘೋಷಿಸಿದವು ಆದರೆ ರಾತ್ರಿ ಮತ್ತೆ ಪಾಕಿಸ್ತಾನ ಕದನ ವಿರಾಮ ಉಲ್ಲಂಘಿಸಿ ನಾಲ್ಕು ರಾಜ್ಯಗಳನ್ನು ಗುರಿಯಾಗಿಸಿಕೊಂಡು ಡ್ರೋನ್ ದಾಳಿ ನಡೆಸಿದೇ. ಭಾರತ ಸೇನೆ ಕೂಡ ಪಾಕಿಸ್ತಾನದ ಎಲ್ಲಾ ಡ್ರೋನ್ ಗಳನ್ನು ಹೊಡೆದು ಧ್ವಂಸಗೊಳಿಸಿದೆ. ಇದೀಗ ಕಾಶ್ಮೀರದಲ್ಲಿ ರಾಜ್ಯ ತನಿಕಾ ಸಂಸ್ಥೆ (SIA) 20 ಹೆಚ್ಚು ಕಡೆ ದಾಳಿ ಮಾಡಿದೆ.
ಹೌದು ದಕ್ಷಿಣ ಕಾಶ್ಮೀರದಲ್ಲಿ 20ಕ್ಕೂ ಹೆಚ್ಚು ಸ್ಥಳಗಳ ಮೇಲೆ SIA ದಾಳಿ ಮಾಡಿದ್ದು, ಉಗ್ರರ ಜೊತೆ ಸಂಪರ್ಕ ಹೊಂದಿದವರ ಮನೆಗಳ ಮೇಲೆ ಇದೀಗ SIA ದಾಳಿ ಮಾಡಿ ಪರಿಶೀಲನೆ ನಡೆಸುತ್ತಿದೆ. ದಾಳಿಯ ವೇಳೆ ಉಗ್ರರ ಜೊತೆ ಸಂಪರ್ಕ ಹೊಂದಿದ ಶಂಕಿತನನ್ನು ವಶಕ್ಕೆ ಪಡೆದು ಪೊಲೀಸರು ಇದೀಗ ವಿಚಾರಣೆ ನಡೆಸುತ್ತಿದ್ದಾರೆ.