ಹಾವೇರಿ : ಪ್ರಧಾನಿ ಮೋದಿ ಅವರು ಕರ್ನಾಟಕದ ಕಾಂಗ್ರೆಸ್ ಸರ್ಕಾರದ ವಿರುದ್ಧ 700 ಕೋಟಿ ರೂ. ಆರೋಪ ಮಾಡಿದ್ದಾರೆ. ಈ ಆರೋಪವನ್ನು ಸಾಬೀತುಪಡಿಸಿದರೆ ರಾಜಕೀಯ ನಿವೃತ್ತಿಯಾಗುವುದಾಗಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಆರೋಪ ಸಾಬೀತುಪಡಿಸಲು ಸಾಧ್ಯವಾಗದಿದ್ದರೆ ನೀವು ರಾಜಕೀಯ ನಿವೃತ್ತಿಯಾಗಬೇಕು ಎಂದು ಮೋದಿಗೆ ಸಿದ್ದರಾಮಯ್ಯ ಸವಾಲು ಹಾಕಿದ್ದಾರೆ.
ಹೌದು ಹಾವೇರಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಮತಯಾಚನೆ ವೇಳೆ ಪ್ರಧಾನಿ ಮೋದಿ ವಿರುದ್ಧ ಗುಡುಗಿದ ಸಿಎಂ ಸಿದ್ದರಾಮಯ್ಯ, ಕರ್ನಾಟಕದ ಅಬಕಾರಿ ಇಲಾಖೆಯಿಂದ 700 ಕೋಟಿ ರೂ. ಲೂಟಿ ಮಾಡಿದೆ ಎಂಬ ಆರೋಪವನ್ನು ಪ್ರಧಾನಿ ನರೇಂದ್ರ ಮೋದಿ ಸಾಬೀತು ಮಾಡಿದರೆ ನಾನು ರಾಜಕೀಯ ನಿವೃತ್ತಿಯಾಗುವೆ.ಒಂದು ವೇಳೆ ಆರೋಪ ಸಾಬೀತು ಪಡಿಸಲು ಆಗದಿದ್ದರೆ ನೀವು ರಾಜಕೀಯ ನಿವೃತ್ತಿಯಾಗಬೇಕು ಎಂದು ಪ್ರಧಾನಿ ಮೋದಿಗೆ ಸಿದ್ದರಾಮಯ್ಯ ನೇರ ಸವಾಲು ಹಾಕಿದ್ದಾರೆ.