ಬೆಂಗಳೂರು : ರಾಜ್ಯ ರಾಜಕಾರಣದಲ್ಲಿ ಇದೀಗ ದಿನದಿಂದ ದಿನಕ್ಕೆ ಹೊಸ ಹೊಸ ಬದಲಾವಣೆಗಳು ಆಗುತ್ತಿದ್ದು. ಸದ್ಯ ರಾಜ್ಯದಲ್ಲಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ ಹಾಗೂ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ದಲ್ಲಿ ನಡೆದ ಅಕ್ರಮ ಪ್ರಕರಣ ಭಾರಿ ಚರ್ಚೆಗೆ ಗ್ರಾಸವಾಗಿದೆ. ಅದರಲ್ಲೂ ಮುಡಾ ಹಗರಣ ಅಂತೂ ಸಿಎಂ ಸಿದ್ದರಾಮಯ್ಯ ಅವರಿಗೆ ಇರಿಸು ಮುರಿಸು ಉಂಟು ಮಾಡಿದೆ. ಸದ್ಯ ಸಿದ್ದರಾಮಯ್ಯ ಅವರು ಅಜ್ಞಾತ ಸ್ಥಳಕ್ಕೆ ತೆರಳಿದ್ದಾರೆ ಎಂದು ತಿಳಿದುಬಂದಿದೆ.
ಹೌದು ಕಾವೇರಿ ನಿವಾಸದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇದೀಗ ಅಜ್ಞಾತ ಸ್ಥಳಕ್ಕೆ ತೆರಳಿದ್ದಾರೆ ಎಂದು ಹೇಳಲಾಗುತ್ತಿದೆ. ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ರಾಜ್ಯಪಾಲರು ಪ್ರಾಸೀಕ್ಯೂಷನ್ ನೋಟಿಸ್ ಜಾರಿ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಇಂದು ಸಚಿವ ಸಂಪುಟದಿಂದ ಸಿಎಂ ಸಿದ್ದರಾಮಯ್ಯ ಹೊರಗೆ ಉಳಿದಿದ್ದರು.
ತುರ್ತು ಸುದ್ದಿಗೋಷ್ಠಿ ಕರೆದ ಡಿಸಿಎಂ ಡಿಕೆ ಶಿವಕುಮಾರ್
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಚಿವ ಸಂಪುಟದಿಂದ ಹೊರಗೆ ಉಳಿದಿದ್ದರಿಂದ ಇಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ನೇತೃತ್ವದಲ್ಲಿ ಸಚಿವ ಸಂಪುಟ ಸಭೆ ನಡೆಯಿತು. ಸಭೆಯಲ್ಲಿ ಎಲ್ಲಾ ಸಚಿವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪರವಾಗಿ ನಿಂತಿದ್ದು ರಾಜ್ಯಪಾಲರು ನೀಡಿದ ನೋಟಿಸ್ ಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದರು.
ಇದಾದ ಬಳಿಕ ಇಂದು ಸಂಜೆ 4 ಗಂಟೆಗೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ವಿಧಾನಸಭೆಯಲ್ಲಿ ಸುದ್ದಿಗೋಷ್ಠಿ ನಡೆಸಿ ರಾಜ್ಯಪಾಲರು ಮುಖ್ಯಮಂತ್ರಿ ಅವರಿಗೆ ನೀಡಿದ ನೋಟಿಸ್ ಪಡೆಯಬೇಕು ಎಂದು ಮನವಿ ಮಾಡಿದರು. ಇದೀಗ ಸದಾಶಿವನಗರದಲ್ಲಿರುವ ಡಿಕೆ ಶಿವಕುಮಾರ್ ಅವರ ಮನೆಯಲ್ಲಿ ತುರ್ತು ಸುದ್ದಿಗೋಷ್ಠಿಯನ್ನು ಕರೆದಿದ್ದಾರೆ.