ಬೆಂಗಳೂರು : ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ದಿನದಿಂದ ಫೋನ್ ಕದ್ದಾಲಿಕೆ ನಡೆಯುತ್ತಿದೆ ಎಂದು ವಿಪಕ್ಷ ನಾಯಕ ಆರ್. ಅಶೋಕ್ ಗಂಭೀರ ಆರೋಪ ಮಾಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಫೋಣ್ ಕದ್ದಾಲಿಕೆ ಆಗುವುದರಲ್ಲಿ ಯಾವುದೇ ಅನುಮಾನ ಬೇಡ. ಆಡಳಿತ ಮತ್ತು ವಿರೋಧ ಪಕ್ಷದ ನಾಯಕರ ಫೋನ್ ಕದ್ದಾಲಿಕೆ ಆಗುತ್ತಿದೆ. ನನ್ನ ಮತ್ತು ಕುಮಾರಸ್ವಾಮಿ ಅವರ ಫೋನ್ ಕದ್ದಾಲಿಕೆ ಆಗುತ್ತಿದೆ. ಸಚಿವ ರಾಜಣ್ಣ, ಪುತ್ರ ರಾಜೇಂದ್ರ ಅವರ ಫೋನ್ ಕೂಡ ಕದ್ದಾಲಿಕೆ ಆಗಿದೆ ಎಂದು ಹೇಳಿದ್ದಾರೆ.
ರಾಜ್ಯದಲ್ಲಿ ವಿರೋಧ ಪಕ್ಷಗಳ ಎಲ್ಲಾ ನಾಯಕರು, ಎಲ್ಲಾ ಶಾಸಕರುಮ ನನ್ನ ಫೋನ್ ಕರೆಗಳನ್ನು ಟ್ಯಾಪಿಂಗ್ ಮಾಡಲಾಗುತ್ತಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ.