ಬೆಂಗಳೂರು : ಸಿಎಂ ಆಗಿ ಸಿದ್ದರಾಮಯ್ಯರನ್ನು ಆಯ್ಕೆ ಮಾಡಿದ್ದು 5 ವರ್ಷಕ್ಕೆ ಎಂದು ಸಿಎಂ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ ಹೇಳಿಕೆ ನೀಡಿದ್ದಾರೆ.
ಸಿಎಂ ಸ್ಥಾನ ಕೈತಪ್ಪಿದ ಬಗ್ಗೆ ಮಲ್ಲಿಕಾರ್ಜುನ ಖರ್ಗೆ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಸಿಎಂ ಆಗಿ ಸಿದ್ದರಾಮಯ್ಯರನ್ನು ಆಯ್ಕೆ ಮಾಡಿದ್ದು 5 ವರ್ಷಕ್ಕೆ, ಬದಲಾವಣೆ ಆಗಬೇಕಾದ್ರೆ CLP ಸಭೆಯಲ್ಲಿ ತೀರ್ಮಾನಿಸಬೇಕು. ಆದರೆ ಈಗ ಆ ಸಂದರ್ಭ ಬರುವುದೇ ಇಲ್ಲ ಎಂದರು.
ಯಾರು ಬೇಕಾದ್ರೂ ಸಿಎಂ ಆಗಬಹುದು, ಅದರಲ್ಲಿ ತಪ್ಪಿಲ್ಲ. ಆದರೆ ಈ ಆ ಸಂದರ್ಭ ಬಂದಿಲ್ಲ ಅಂತಾ ಹೇಳಿದ್ದೇನೆ. ಮಲ್ಲಿಕಾರ್ಜುನ್ ಖರ್ಗೆ ಮುಖ್ಯಮಂತ್ರಿ ಆಗುವುದಕ್ಕೆ ಅರ್ಹ ವ್ಯಕ್ತಿ. ಖರ್ಗೆ ಎಐಸಿಸಿ ಅಧ್ಯಕ್ಷರಾಬೇಕು ಎಂದು ಹೇಳಿದವನು ನಾನು. ಮಲ್ಲಿಕಾರ್ಜುನ್ ಖರ್ಗೆ ಪ್ರಧಾನಿ ಆಗಲಿ ಅಂತ ವಿಶ್ ಮಾಡ್ತಿನಿ. ಸಮಯ ಬಂದ್ರೆ ಖರ್ಗೆ ಪ್ರಧಾನಮಂತ್ರಿ ಆಗಬಹುದು ಎಂದು ಹೇಳಿದ್ದಾರೆ.