ಬೆಂಗಳೂರು : ಸಿದ್ದರಾಮಯ್ಯ ಅವರು ಸಿಎಂ ಆಗಿ ಹೆಚ್ಚು ದಿನ ಇರುವುದಿಲ್ಲ. ನವೆಂಬರ್ ವರೆಗೆ ಮಾತ್ರ ಅವರು ಸಿಎಂ ಆಗಿರುತ್ತಾರೆ ಎಂದು ವಿಪಕ್ಷ ನಾಯಕ ಆರ್. ಅಶೋಕ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಳಗಾವಿಯಲ್ಲಿ ಎಎಸ್ ಪಿಯನ್ನು ಸಿಎಂ ಸಿದ್ದರಾಮಯ್ಯ ವೇದಿಕೆ ಮೇಲೆ ಏಕವಚನದಲ್ಲಿ ಮಾತನಾಡಿದ್ದಾರೆ. ಎಎಸ್ ಪಿ ಅವರು ಏನಾದರೂ ಇವರ ಮನೆ ಕಸಗುಡಿಸುವ ಆಳಾ? ಡಿಸಿ, ಎಎಸ್ ಪಿ ಬಗ್ಗೆ ಏಕವಚನದಲ್ಲಿ ಮಾತನಾಡಿದ್ದು ತಪ್ಪು, ಸಿದ್ದರಾಮಯ್ಯ ಹೆಚ್ಚು ದಿನ ಸಿಎಂ ಆಗಿರುವುದಿಲ್ಲ ಇದರಿಂದ ಒತ್ತಡಕ್ಕೆ ಒಳಗಾಗಿ ಸಿದ್ದರಾಮಯ್ಯ ಹೀಗೆ ಮಾತನಾಡುತ್ತಿದ್ದಾರೆ ಎಂದರು.
ಸಿಎಂ ಸಿದ್ದರಾಮಯ್ಯ ಅವರು ಎಎಸ್ ಪಿ ಗದರಿಸಿದ ವಿಚಾರದಲ್ಲಿ ಸಿಎಂ ನಡೆಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಕೂಡ ವಿರೋಧ ವ್ಯಕ್ತಪಡಿಸಿದ್ದಾರೆ ಎಂದು ಹೇಳಿದ್ದಾರೆ.