ಬೆಳಗಾವಿ : ಬೆಳಗಾವಿಯಲ್ಲಿ ಪ್ರೀತಿಸಿ ಮದುವೆಯಾಗಿದ್ದ ಗರ್ಭಿಣಿ ಪತ್ನಿಯನ್ನು ಉಸಿರುಗಟ್ಟಿಸಿ ಹತ್ಯೆ ಮಾಡಿ ಪತಿ ಮತ್ತು ಕುಟುಂಬದವರು ಪರಾರಿಯಾಗಿರುವ ಘಟನೆ ನಡೆದಿದೆ.
ಬೆಳಗಾವಿ ಜಿಲ್ಲೆಯ ಮಚ್ಚೆ ಗ್ರಾಮದ ಹೊರವಲಯದಲ್ಲಿ ಮೂರು ತಿಂಗಳ ಗರ್ಭಣಿ ಮಹಿಳೆ ಮಂಜುಳಾ ಅಲಿಯಾಸ್ ನಯಾನ ಹತ್ಯೆ ಮಾಡಲಾಗಿದೆ. ಕಳೆದ ಒಂದು ವರ್ಷದ ಹಿಂದೆಯಷ್ಟೇ ಮದುವೆಯಾಗಿದ್ದ ನಯನಾ ಮತ್ತು ಬೋರೇಶ್ ಇದೀಗ ಹೆಂಡತಿಯನ್ನೇ ಕೊಲೆ ಮಾಡಿ ಪರಾರಿಯಾಗಿರುವ ಆರೋಪ ಕೇಳಿಬಂದಿದೆ.
ಇನ್ ಸ್ಟಾಗ್ರಾಂನಲ್ಲಿ ಇಬ್ಬರು ಪರಿಚಯವಾಗಿದ್ದರು. ಮೈಸೂರಿನ ಕುಂಬಾರಕೊಪ್ಪಲಿನ ಮಂಜುಳಾ ಅಲಿಯಾಸ್ ನಯಾನ ಬೆಳಗಾವಿ ತಾಲೂಕಿನ ಮಚ್ಚಿ ಗ್ರಾಮದ ಬೋರೇಶ್ ನನ್ನು ಕಳೆದ ವರ್ಷ ಮದುವೆಯಾಗಿದ್ದರು. ಇದೀಗ ಮಹಿಳೆ ಮೂರು ತಿಂಗಳ ಗರ್ಭಿಣಿಯಾಗಿದ್ದರು ಎನ್ನಲಾಗಿದೆ. ಗರ್ಭಪಾತ ಮಾಡಿಸುವಂತೆ ಬೋರೇಶ್ ಕುಟುಂಬಸ್ಥರು ಒತ್ತಾಯಿಸಿದ್ದರು ಎನ್ನಲಾಗಿದ್ದು, ಇದಕ್ಕೆ ಒಪ್ಪದೇ ಇದ್ದಾಗ ಕೊಲೆ ಮಾಡಿ ಪರಾರಿಯಾಗಿದ್ದಾರೆ ಎನ್ನುವ ಆರೋಪ ಕೇಳಿಬಂದಿದೆ. ಘಟನಾ ಸ್ಥಳಕ್ಕೆ ಡಿಸಿಪಿ ರೋಹನ್ ಜಗದೀಶ್ ಭೇಟಿ ನೀಡಿದ್ದಾರೆ. ಬೆಳಗಾಗಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.