ಬೆಂಗಳೂರು : ಬೆಂಗಳೂರಿನಲ್ಲಿ ಮತ್ತೊಂದು ಮರ್ಡರ್ ಆಗಿದ್ದು, ಅಕ್ರಮ ಸಂಬಂಧದ ಶಂಕೆ ಹಿನ್ನೆಲೆಯಲ್ಲಿ ನಡು ರಸ್ತೆಯಲ್ಲೇ ಕತ್ತು ಕೊಯ್ದು ಪತ್ನಿಯನ್ನು ಪತಿಯೇ ಬರ್ಬರವಾಗಿ ಹತ್ಯೆ ಮಾಡಿರುವ ಘಠನೆ ನಡೆದಿದೆ.
ಬೆಂಗಳೂರಿನ ದೊಡ್ಡ ತೋಗೂರು ಬಳಿಯ ಪ್ರಗತಿ ನಗರದಲ್ಲಿ ನಡುರಸ್ತೆಯಲ್ಲೇ ಪತ್ನಿಯ ಕತ್ತು ಕೊಯ್ದು ಪತಿ ಹತ್ಯೆ ಮಾಡಿದ್ದಾನೆ. ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ಮೂಲದ ಶಾರದಾ(35) ಹತ್ಯೆಯಾದ ಮಹಿಳೆ.
ಅಕ್ರಮ ಸಂಬಂಧ ಶಂಕೆ ಹಿನ್ನೆಲೆಯಲ್ಲಿ ಪತ್ನಿಯನ್ನು ಪತಿ ಹತ್ಯೆ ಮಾಡಿದ್ದು, ಸದ್ಯ ಆರೋಪಿ ಪತಿಯನ್ನು ಪೊಲೀಸರು ಬಂಧಿಸಿದ್ದಾರೆ. ಎಲೆಕ್ಟ್ರಾನಿಕ್ ಸಿಟಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.