ಚೆನ್ನೈ : ಪದ್ಮಭೂಷಣ ಪ್ರಶಸ್ತಿಗೆ ಭಾಜನರಾದ ಖ್ಯಾತ ಹಿನ್ನೆಲೆ ಗಾಯಕಿ ಪಿ.ಸುಶೀಲಾ ಅವರನ್ನು ಚೆನ್ನೈನ ಕಾವೇರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಪದ್ಮಭೂಷಣ ಪುರಸ್ಕೃತೆ ಹಾಗೂ ಹಿನ್ನೆಲೆ ಗಾಯಕಿ ಪಿ.ಸುಶೀಲಾ ಅನಾರೋಗ್ಯದಿಂದ ಬಳಲುತ್ತಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಕುಟುಂಬ ಸದಸ್ಯರು ಚೆನ್ನೈನ ಕಾವೇರಿ ಆಸ್ಪತ್ರೆಗೆ ದಾಖಲಿಸಿದ್ದರು.
ಸದ್ಯ ವೈದ್ಯರು ಆಕೆಗೆ ಚಿಕಿತ್ಸೆ ನೀಡುತ್ತಿದ್ದಾರೆ. 86 ವರ್ಷದ ಸುಶೀಲಾ ಅವರು ಕೆಲವು ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದರು ಎಂದು ಕುಟುಂಬ ಸದಸ್ಯರು ತಿಳಿಸಿದ್ದಾರೆ.
ಹೊಟ್ಟೆ ನೋವು ಕಾಣಿಸಿಕೊಂಡ ಕೂಡಲೇ ಸುಶೀಲಾ ಅವರನ್ನು ಕುಟುಂಬ ಸದಸ್ಯರು ಆಕೆಯನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಆಕೆಯನ್ನು ಪರೀಕ್ಷಿಸಿದ ವೈದ್ಯರು ತಕ್ಷಣ ಚಿಕಿತ್ಸೆ ಆರಂಭಿಸಿದರು. ಸದ್ಯ ಅವರ ಆರೋಗ್ಯ ಸ್ಥಿರವಾಗಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.