ಬೆಂಗಳೂರು : ಬಹು ಕೋಟಿ ಬಿಟ್ ಕಾಯಿನ್ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಎಸ್ಐಟಿ ಅಧಿಕಾರಿಗಳು ಈ ಒಂದು ಪ್ರಕರಣದಲ್ಲಿ ಭಾಗಿಯಾಗಿದ್ದರೆನ್ನಲಾದ ಡಿವೈಎಸ್ಪಿ ಶ್ರೀಧರ್ ಪೂಜಾರ್ ರನ್ನು ಬಂಧಿಸಿದ್ದಾರೆ. ಹೌದು ಬಿಟ್ ಕಾಯಿನ್ ಹಗರಣಕ್ಕೆ ಸಂಬಂಧಪಟ್ಟಂತೆ ಬೆಂಗಳೂರಿನ ಕಾಟನ್ ಪೇಟೆ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿತ್ತು ಈ ಒಂದು ಕೇಸ್ ಅಡಿಯಲ್ಲಿ ಡಿವೈಎಸ್ಪಿ ಶ್ರೀಧರ್ ಪೂಜಾರ್ ನನ್ನು SIT ಅಧಿಕಾರಿಗಳು ಬಂಧಿಸಿದ್ದಾರೆ.
ಈ ಮೊದಲು ಬಂಧನ, ಜಾಮೀನು
ಇದಕ್ಕೂ ಮೊದಲು ಫೆಬ್ರವರಿ 17 ರಂದು ರಂದು ಇದೇ ಪ್ರಕರಣದಲ್ಲಿ ಪೊಲೀಸರು ಶ್ರೀಧರ್ ಪೂಜಾರ್ ಅವರನ್ನು ಬಂಧಿಸಿದ್ದರು. ಬಳಿಕ ಹೈಕೋರ್ಟ್ ಏಕ ಸದಸ್ಯ ಪೀಠದಿಂದ ಶ್ರೀಧರ್ ಪೂಜಾರಿಗೆ ಜೂನ್ 17ಕ್ಕೆ ಜಾಮೀನು ಮಂಜೂರು ನೀಡಿ ಆದೇಶ ಹೊರಡಿಸಲಾಗಿತ್ತು.
ಬಹುಕೋಟಿ ಬಿಟ್ ಕಾಯಿನ್ ಹಗರಣ ಪ್ರಕರಣದಲ್ಲಿ ಆರೋಪಿ ಪೊಲೀಸ್ ಅಧಿಕಾರಿ ಶ್ರೀಧರ್ ಪೂಜಾರಿ ವಿರುದ್ಧ ಮೊದಲು ಆರೋಪ ಕೇಳಿಬಂದಿತ್ತು. ಹಾಗಾಗಿ ಕೇಸ್ ದಾಖಲಿಸಿಕೊಂಡಿದ್ದ ಎಸ್ಐಟಿ ಫೆಬ್ರುವರಿ 17ರಂದು ಬಂಧಿಸಲು ಮುಂದಾಗಿದ್ದರು. ಆದರೆ ಈ ವೇಳೆ ಅಧಿಕಾರಿಗಳ ಮೇಲೆ ಕಾರು ಹತ್ತಿಸಲು ಯತ್ನಿಸಿ ಪರಾರಿಯಾಗಿದ್ದರು. ಈ ವಿಚಾರವಾಗಿ ವಿಧಾನಸೌಧ ಪೊಲೀಸರು ಐಪಿಸಿ ಸೆಕ್ಷನ್ 307 ಅಡಿ (ಕೊಲೆ ಯತ್ನ) ಮತ್ತು 353 ಸರ್ಕಾರಿ ಕರ್ತವ್ಯಕ್ಕೆ ಅಡ್ಡಿ ಪ್ರಕರಣ ದಾಖಲಿಸಿಕೊಂಡಿದ್ದರು.
ಕಾರು ಹತ್ತಿಸಲು ಯತ್ನಿಸಿ ಪರಾರಿಯಾಗಿದ್ದ ಶ್ರೀಧರ್ ಪೂಜಾರಿ ತೆರೆಮರೆಯಲ್ಲೇ ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ್ದರು. ಪ್ರಕರಣದಲ್ಲಿ ವಿಚಾರಣೆಗೆ ಸಹಕರಿಸದೇ ತಲೆಮರೆಸಿಕೊಂಡಿದ್ದರಿಂದ ವಿಚಾರಣಾ ನ್ಯಾಯಾಲಯದಿಂದ ಘೋಷಿತ ಆರೋಪಿ ಎಂದು ವಾರಂಟ್ ಜಾರಿ ಮಾಡಲಾಗಿತ್ತು. ವಾರಂಟ್ ಪ್ರಶ್ನಿಸಿ ಶ್ರೀಧರ್ ಕೆ. ಪೂಜಾರ್ ಹೈಕೋರ್ಟ್ಗೆ ಅರ್ಜಿ ಕೂಡ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ಬಳಿಕ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಅಧಿಕಾರಿ ಶ್ರೀಧರ್ ಪೂಜಾರಿಗೆ ನಿರೀಕ್ಷಣಾ ಜಾಮೀನು ನೀಡಿ ಹೈಕೋರ್ಟ್ ಏಕಸದಸ್ಯ ಪೀಠ ಆದೇಶ ನೀಡಿತ್ತು.