ಬೆಂಗಳೂರು : ಅತ್ಯಾಚಾರ ಪ್ರಕರಣ ಹಾಗೂ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸನ ಜಿಲ್ಲೆಯ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಇದೀಗ ನ್ಯಾಯಾಲಯಕ್ಕೆ ಸುಮಾರು 1632 ಪುಟಗಳ ಮತ್ತೊಂದು ಚಾರ್ಜ್ ಶೀಟ್ ಅನ್ನು ಸಲ್ಲಿಸಲಾಗಿದೆ.
ಹೌದು ಬೆಂಗಳೂರಿನ 42ನೇ ಎಸಿಎಮ್ಎಂ ನ್ಯಾಯಾಲಯಕ್ಕೆ ಪ್ರಜ್ವಲ್ ರೇವಣ್ಣ ಅವರು ಮತ್ತೊಂದು ಚಾರ್ಜ್ ಶೀಟ್ ಸಲ್ಲಿಸಲಾಗಿದೆ. ಎಸ್ಐಟಿ ಅಧಿಕಾರಿಗಳು 1,632 ಪುಟಗಳ ಚಾರ್ಟನ್ನು ಸಲ್ಲಿಸಿದ್ದಾರೆ.ಅಲ್ಲದೆ 113 ಸಾಕ್ಷಿಗಳನ್ನು ಒಳಗೊಂಡಂತಹ ಈ ಚಾರ್ಜ್ ಶೀಟ್ ತನಿಖಾಧಿಕಾರಿ ಶೋಭಾ ಅವರಿಂದ ಕೋರ್ಟಿಗೆ ಸಲ್ಲಿಸಲಾಗಿದೆ. ಕಿಡ್ನ್ಯಾಪ್ ಆಗಿದ್ದ ಸಂತ್ರಸ್ತೆ, ರೇಪ್ ಕೇಸ್ ಸಂಬಂಧ ಈ ಚಾರ್ಜ್ ಶೀಟ್ ಸಲ್ಲಿಸಲಾಗಿದೆ.
ಸೆ.12ಕ್ಕೆ ಜಾಮೀನು ಅರ್ಜಿ ಮುಂದೂಡಿಕೆ
ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ವಿಚಾರಣೆಯನ್ನು ಸೆ.12 ಕ್ಕೆ ಮುಂದೂಡಿದೆ. ಅರ್ಜಿದಾರರ ಪರವಾಗಿ ಹಾಜರಾಗಿದ್ದ ವಕೀಲ ಜಿ.ಅರುಣ್, ಎಸ್‌ಐಟಿಯು ಸಂಬಂಧಿತ ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಸಿದ್ದು, ಇದೀಗ ಮತ್ತೊಮ್ಮೆ ಜಾಮೀನು ಅರ್ಜಿಯ ವಿಚಾರಣೆಯನ್ನು ಸೆ.12 ಕ್ಕೆ ಮುಂದೂಡಿದೆ.
ಹಾಸನ ಜಿಲ್ಲೆಯ ಹೊಳೆನರಸೀಪುರ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣದಲ್ಲಿ ಜಾಮೀನು ಕೋರಿರುವ ಮತ್ತು ಬೆಂಗಳೂರು ಸೈಬರ್ ಅಪರಾಧ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಕೋರಿ ಪ್ರಜ್ವಲ್ ಸಲ್ಲಿಸಿರುವ ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ನ್ಯಾಯಪೀಠಕ್ಕೆ ಜಾಮೀನು ಹಾಗೂ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಮುಂದೂಡಿದೆ.