ಬೆಂಗಳೂರು : ಅತ್ಯಾಚಾರ ಪ್ರಕರಣದಲ್ಲಿ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ಜೈಲು ಪಾಲಾಗಿದ್ದು, ಇದೀಗ ಮತ್ತೆ ನಾಲ್ಕು ದಿನ ಎಸ್‌ ಐಟಿ ಕಸ್ಟಡಿಗೆ ನೀಡಿ ಕೋರ್ಟ್‌ ಆದೇಶ ಹೊರಡಿಸಿದೆ.

ಅತ್ಯಾಚಾರ ಪ್ರಕರಣದಲ್ಲಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಜೈಲು ಪಾಲಾಗಿದ್ದಾರೆ. ಆದರೆ ಪ್ರಜ್ವಲ್ ವಿರುದ್ಧದ ಮೂರನೇ ಅತ್ಯಾಚಾರ ಪ್ರಕರಣದಲ್ಲಿ ಎಸ್‍ಐಟಿ ಅಧಿಕಾರಿಗಳು ಮತ್ತೆ ನಾಲ್ಕು ದಿನ ಕಸ್ಟಡಿಗೆ ಪಡೆದುಕೊಂಡಿದ್ದಾರೆ.

ಈಗಾಗಲೇ ಎರಡು ಪ್ರಕರಣದಲ್ಲಿ ಪೊಲೀಸ್ ಕಸ್ಟಡಿಗೆ ಪಡೆದಿದ್ದ ಎಸ್‍ಐಟಿ (SIT) ಇದೀಗ ಮೂರನೇ ಪ್ರಕರಣದಲ್ಲಿ ಕಸ್ಟಡಿಗೆ ಪಡೆದುಕೊಂಡಿದೆ.

Share.
Exit mobile version