ಹಾಸನ : ಅಶ್ಲೀಲ ವಿಡಿಯೋ ಪ್ರಕರಣ ಸಂಬಂಧ ಪೆನ್ ಡ್ರೈವ್ ಹಂಚಿಕೆ ಮಾಡಿರುವ ಆರೋಪ ಸಂಬಂಧ ನವೀನ್ ಗೌಡ ಎಂಬಾತನನ್ನು ವಿಚಾರಣೆಗೆ ಹಾಜರಾಗುವಂತೆ ಎಸ್ ಐಟಿ ನೋಟಿಸ್ ನೀಡಿದೆ. 

ಪೆನ್ ಡ್ರೈವ್ ಹಂಚಿಕೆ ಆರೋಪದಲ್ಲಿ ನವೀನ್ ಗೌಡಗೆ ಎಸ್ ಐಟಿ ನೋಟಿಸ್ ಜಾರಿ ಮಾಡಿದ್ದು, ಮೇ. ೪ ರಂದು ವಿಚಾರಣೆಗೆ ಹಾಜರಾಗುವಂತೆ ತಿಳಿಸಿದೆ. ಈಗಾಗಲೇ ನವೀನ್ ಗೌಡ ಎಸ್ ಐಟಿ ಅಧಿಕಾರಿಗಳಿಗೆ ಫೋನ್ ನಲ್ಲಿ ಪ್ರಾಥಮಿಕ ಮಾಹಿತ ನೀಡಿದ್ದು, ನಾನು ಪೆನ್ ಡ್ರೈ ಹಂಚಿಕೆ ಮಾಡಿಲ್ಲ ಎಂದು ಹೇಳಿದ್ದಾರೆ.

ಹಾಸನದಲ್ಲಿ ಪೆನ್ ಡ್ರೈ ಹಂಚಿಕೆ ಆರೋಪದ ಹಿನ್ನೆಲೆಯಲ್ಲಿ ಹಾಸನದ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ನವೀನ್ ಗೌಡ ವಿರುದ್ಧ ದೂರು ದಾಖಲಾಗಿತ್ತು. ಈಹಿನ್ನೆಲೆಯಲ್ಲಿ ಎಸ್ ಐಟಿ ಅಧಿಕಾರಿಗಳು ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದ್ದಾರೆ.

ಹಾಸನದಲ್ಲಿ ಕಿಡಿಗೇಡಿಗಳು ದಿನಕೊಂದು ವಿಡಿಯೋಗಳನ್ನು ಹರಿಬಿಡುತ್ತಿದ್ದು, ವಿಡಿಯೋಗಳು, ಪೋಟೋಗಳನ್ನು ಕಿಡಿಗೇಡಿಗಳು ವಾಟ್ಸಪ್, ಇನ್ ಸ್ಟಾಗ್ರಾಂ ಹಾಗೂ ಟೆಲಿಗ್ರಾಂನಲ್ಲಿ ಶೇರ್ ಮಾಡಿ ವೈರಲ್ ಮಾಡುತ್ತಿದ್ದಾರೆ. ನೂರಾರು ಫೋಟೋಗಳು, ೨೦ ಕ್ಕೂ ಹೆಚ್ಚು ವಿಡಿಯೋಗಳನ್ನು ಮತ್ತೆ ಹರಿಬಿಡಲಾಗಿದೆ. ಹಾಸನ ಮಾತ್ರವಲ್ಲದೇ ರಾಜ್ಯಾದ್ಯಂತ ವಿಡಿಯೋಗಳು ವೈರಲ್ ಆಗಿವೆ.

ಅಶ್ಲೀಲ ವಿಡಿಯೋ ಪ್ರಕರಣವನ್ನು ಎಸ್ ಐಟಿಗೆ ನೀಡುವ ಮುನ್ನವೇ ಪ್ರಜ್ವಲ್ ರೇವಣ್ಣ ಅವರು ಜರ್ಮನಿಗೆ ಹೋಗಿದ್ದು,ವಿಚಾರಣೆಗೆ ಹಾಜರಾಗುವಂತೆ ಎಸ್ ಐಟಿ ಅಧಿಕಾರಿಗಳು ನೋಟಿಸ್ ನೀಡಿದ್ದರು. ಆದರೆ ಪ್ರಜ್ವಲ್ ರೇವಣ್ಣ ಜರ್ಮನಿಯಲ್ಲಿರುವ ಕಾರಣ ವಿಚಾರಣೆಗೆ ಒಂದು ವಾರಗಳ ಕಾಲ ಸಮಯ ಕೇಳಿದ್ದಾರೆ.

Share.
Exit mobile version