ಬೆಂಗಳೂರು: ಅತ್ಯಾಚಾರ, ಜಾತಿ ನಿಂದನೆ ಹಾಗೂ ಗುತ್ತಿಗೆದಾರನಿಗೆ ಬೆದರಿಕೆ ಹಾಕಿದ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಬಿಜೆಪಿ ಶಾಸಕ ಮುನಿರತ್ನರವರ ವೈಯಾಲಿಕಾವಲ್ ಮನೆ ಸೇರಿ ಹಲವು ಕಡೆ ವಿಶೇಷ ತನಿಖಾ ತಂಡದ ಅಧಿಕಾರಿಗಳು ಶನಿವಾರ ಬೆಳಗ್ಗೆ ದಾಳಿ ನಡೆಸಿದರು.
ಮೂರು ತಂಡಗಳಲ್ಲಿ ಎಸ್ ಐಟಿ ತಂಡ ಮುನಿರತ್ನ ಮನೆ ಮೇಲೆ ದಾಳಿ ನಡೆಸಿದೆ.ಎಸ್ಐಟಿ ಎಸಿಪಿ ಕವಿತಾ ನೇತೃತ್ವದಲ್ಲಿ ದಾಳಿ ನಡೆಸಿದ ಅಧಿಕಾರಿಗಳ ತಂಡ ದಾಖಲೆಗಳ ಪರಿಶೀಲನೆ ನಡೆಸಿದೆ.