ಬೆಂಗಳೂರು : ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಎಸ್ಐಟಿ ಅಧಿಕಾರಿಗಳು ಮಾಜಿ ಸಚಿವ ಬಿ ನಾಗೇಂದ್ರ ಅವರಿಗೆ ವಿಚಾರಣೆಗೆ ಹಾಜರಾಗಿ ಎಂದು ನೋಟಿಸ್ ನೀಡಿದ್ದಾರೆ ಎಂದು ತಿಳಿದುಬಂದಿದೆ.
ಹೌದು ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ನಾಗೇಂದ್ರಗೆ ಸಂಕಷ್ಟ ಎದುರಾಗಿದ್ದು, ವಿಶೇಷ ತನಿಕಾ ತಂಡದಿಂದ (SIT) ನೋಟಿಸ್ ಜಾರಿಗೊಳಿಸಲಾಗಿದೆ. ಅಲ್ಲದೆ ನಿಗಮದ ಅಧ್ಯಕ್ಷ ಬಸನಗೌಡ ದದ್ದಲಗು SIT ವಿಚಾರಣೆಗೆ ಹಾಜರಾಗುವಂತೆ ಇಬ್ಬರಿಗೂ ನೋಟಿಸ್ ನೀಡಲಾಗಿದೆ ಎಂದು ತಿಳಿದುಬಂದಿದೆ.
ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಕೋಟ್ಯಾಂತರ ರೂಪಾಯಿ ಅಕ್ರಮವಾಗಿ ಹಣ ವರ್ಗಾವಣೆ ಆಗಿದೆ ಎಂದು ನಿಗಮದ ಅಧ್ಯಕ್ಷರ ಚಂದ್ರಶೇಖರ ಇತ್ತೀಚಿಗೆ ಆತ್ಮಹತ್ಯೆ ಮಾಡಿಕೊಂಡಿದ್ದರು. ನಂತರ ಸರ್ಕಾರ ಪ್ರಕರಣವನ್ನು ಸಿಐಡಿ ಗೆ ಬಯಸಿತ್ತು ಇದಾದ ಬಳಿಕ ಹಲವು
ಬೆಳವಣಿಗೆಯ ನಂತರ ಸಚಿವ ಸ್ಥಾನಕ್ಕೆ ಬಿ. ನಾಗೇಂದ್ರ ಅವರು ರಾಜೀನಾಮೆ ನೀಡಿದ್ದರು. ಇದೀಗ ಮಾಜಿ ಸಚಿವ ಬಿ ನಾಗೇಂದ್ರ ಅವರಿಗೆ ವಿತರಣೆಗೆ ಹಾಜರಾಗುವಂತೆ ಅಧಿಕಾರಿಗಳು ನೋಟಿಸ್ ನೀಡಿದ್ದಾರೆ ಎಂದು ತಿಳಿದುಬಂದಿದೆ.