ಬೆಳಗಾವಿ : ಮಾಜಿ ಮುಖ್ಯಮಂತ್ರಿ ಎಸ್ಎಂ ಕೃಷ್ಣ ಹಾಗೂ ಮಾಜಿ ವಿದೇಶಾಂಗ ಸಚಿವ ಎಸ್ಎಂ ಕೃಷ್ಣ ಅವರು ತಡರಾತ್ರಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಈ ಹಿನ್ನೆಲೆಯಲ್ಲಿ ಇಂದು ವಿಧಾನಸಭೆಯ ಸ್ಪೀಕರ್ ಯುಟಿ ಖಾದರ್ ಅಧ್ಯಕ್ಷತೆಯಲ್ಲಿ ಕಾರ್ಯ ಕಲಾಪಗಳ ಸಲಹಾ ಸಮಿತಿಯ ತುರ್ತು ಸಭೆ ನಡೆಸಲಾಗುತ್ತಿದೆ.
ಹೌದು ಸುವರ್ಣ ಸೌಧದಲ್ಲಿ ಸ್ಪೀಕರ್ ಅಧ್ಯಕ್ಷತೆಯಲ್ಲಿ ಈ ಸಭೆ ನಡೆಸಲಾಗುತ್ತಿದೆ. ವಿಧಾನ ಸಭಾಧ್ಯಕ್ಷ ಯುಟಿ ಖಾದರ್ ಅಧ್ಯಕ್ಷತೆಯಲ್ಲಿ ಈ ಒಂದು ಸಭೆ ನಡೆಸಲಾಗುತ್ತಿದೆ. ಮೀಟಿಂಗ್ ನಲ್ಲಿ ಸಿಎಂ ಸಿದ್ದರಾಮಯ್ಯ ವಿಪಕ್ಷ ನಾಯಕ ಆರ್ ಅಶೋಕ್ ಹಾಗೂ ಗೃಹ ಸಚಿವ ಡಾ. ಜಿ ಪರಮೇಶ್ವರ್, ಸಂಸದೀಯ ವ್ಯವಹಾರಗಳ ಸಚಿವ ಹೆಚ್ ಕೆ ಪಾಟೀಲ್ ಸೇರಿದಂತೆ ಬಿಎಸಿ ಸದಸ್ಯರು ಸಭೆಯಲ್ಲಿ ಭಾಗಿಯಾಗಿದ್ದಾರೆ.