ಶಿವಮೊಗ್ಗ : ವೃತ್ತಿಯ ಕೊನೆಯ ದಿನದಂದೇ ಅಧಿಕಾರಿಯೊಬ್ಬರು ಲಂಚಕ್ಕೆ ಬೇಡಿಕೆ ಇಟ್ಟಿದ್ದು, ಈ ವೇಳೆ ಲೋಕಾಯುಕ್ತ ಬಲೆಗೆ ರೆಡ್ ಹ್ಯಾಂಡ್ ಆಗಿ ಬಲೆಗೆ ಬಿದ್ದಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.ಸ್ಮಾರ್ಟ್ ಸಿಟಿ ಚೀಫ್ ಇಂಜಿನಿಯರ್ ಆಗಿದ್ದ ಕೃಷ್ಣಪ್ಪ ಅವರು ಬಿಲ್ ಪಾಸ್ ಮಾಡಲು ರೂ.1 ಲಕ್ಷ ಲಂಚ ಪಡೆಯುವಾಗ ಲೋಕಾ ಬಲೆಗೆ ಬಿದ್ದಿದ್ದಾರೆ. ಕೃಷ್ಣಪ್ಪ ಶಿವಮೊಗ್ಗ ಸ್ಮಾರ್ಟ್ ಸಿಟಿಯ ಪ್ರಭಾರ ಚೀಫ್ ಇಂಜಿನಿಯರ್ ಆಗಿದ್ದರು.
ಖಾಸಗಿ ಕಂಪನಿಯವರು ಶಿವಮೊಗ್ಗ ಸ್ಮಾರ್ಟ್ ಸಿಟಿಯ ವ್ಯಾಪ್ತಿಯಲ್ಲಿ 7 ಕಡೆ ಡಿಸ್ಪ್ಲೇ ಬೋರ್ಡ್ ಅಳವಡಿಕೆ ಮಾಡಿ, ಅದರ ನಿರ್ವಹಣೆ 5 ವರ್ಷದಲ್ಲಿ ಮುಗಿದಿರುತ್ತದೆ. ಇವರಿಗೆ ಸ್ಮಾರ್ಟ್ ಸಿಟಿಯಿಂದ 11,16,100 ರೂ. ಬಿಲ್ ಪಾವತಿ ಮಾಡಬೇಕಾಗಿರುತ್ತದೆ. ಇದಕ್ಕೆ ಕೃಷ್ಣಪ್ಪ ರೂ. 1 ಲಕ್ಷ ಹಣ ಲಂಚ ನೀಡುವಂತೆ ಕೇಳಿದ್ದರು. ಅದನ್ನು ಪಡೆಯುವಾಗ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ.
ಶಿವಮೊಗ್ಗ ಸ್ಮಾರ್ಟ್ ಸಿಟಿಯಲ್ಲಿ ವಿವಿಧ ಎಲ್ಇಡಿ ಪರದೆಯ ಅಳವಡಿಕೆ ಹಾಗೂ ನಿರ್ವಹಣೆಯ ಮಾಡುತ್ತಿದ್ದ ಖಾಸಗಿ ಕಂಪನಿಯಿಂದ ಇಂಜಿನಿಯರ್ ಬಿಲ್ ಪಾಸ್ ಮಾಡಲು 1 ಲಕ್ಷ ರೂ. ಲಂಚ ಕೇಳಿದ್ದರು ಎಂದು ದೂರು ಬಂದಿತ್ತು. ಈ ಹಣವನ್ನು ಇಂದು ಸ್ಮಾರ್ಟ್ ಸಿಟಿಯ ಆವರಣದಲ್ಲಿ ಪಡೆಯುವಾಗ ಲೋಕಾಯುಕ್ತ ಎಸ್ಪಿ ಮಂಜುನಾಥ್ ಚೌಧರಿ ಅವರ ಮಾರ್ಗದರ್ಶನದಲ್ಲಿ ಬಿ.ಪಿ. ಚಂದ್ರಶೇಖರ್ ಅವರು ದಾಳಿ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.