ಬೆಂಗಳೂರು : ಸ್ಮಾರ್ಟ್ ಮೀಟರ್ ಹಗರಣಕ್ಕೆ ಸಂಬಂಧಿಸಿದಂತೆ ಇಂಧನ ಸಚಿವ ಕೆಜೆ ಜಾರ್ಜ್ ವಿರುದ್ಧದ್ದ ಖಾಸಗಿ ದೂರು ದಾಖಲಾಗಿತ್ತು. ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಕೆಜೆ ಜಾರ್ಜ್ ವಿರುದ್ಧ ದಾಖಲಾಗಿದ್ದ ಖಾಸಗಿ ದೂರನ್ನು ರದ್ದುಪಡಿಸಿ ಹೈಕೋರ್ಟ್ ಆದೇಶ ಹೊರಡಿಸಿದೆ.
ಈ ಪ್ರಕರಣಕ್ಕೆ ಸಂಬಂಧಸಿದಂತೆ ಬಿಜೆಪಿ ನಾಯಕರು ಸಲ್ಲಿಸಿದ್ದ ಪ್ರಕರಣ ಇದೀಗ ಹೈಕೋರ್ಟ್ ರದ್ದುಪಡಿಸಿದೆ. ನ್ಯಾಯಮೂರ್ತಿ ಎಂ.ಐ ಅರುಣ್ ಅವರಿದ್ದ ಹೈಕೋರ್ಟ್ ಪೀಠ ಆದೇಶ ಹೊರಡಿಸಿದೆ. ಈ ಒಂದು ಪ್ರಕರಣದಿಂದ ಸಚಿವ ಕೆಜೆ ಜಾರ್ಜ್ ಗೆ ಸದ್ಯಕ್ಕೆ ರಿಲೀಫ್ ಸಿಕ್ಕಂತಾಗಿದೆ.








