ಶಿವಮೊಗ್ಗ : ರಾಜ್ಯದಲ್ಲಿ ಕಳೆದ ಸೆಪ್ಟೆಂಬರ್ 22 ರಿಂದ ಸಾಮಾಜಿಕ ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಆರಂಭವಾಗಿದ್ದು ಆರಂಭದಲ್ಲಿ ಸರ್ವರ್ ಹಾಗೂ ಕೆಲವು ತಾಂತ್ರಿಕ ದೋಷಗಳು ಕಂಡು ಬಂದು ಸಮೀಕ್ಷೆ ಕುಂಟಿತವಾಗಿತ್ತು ಇದೀಗ ರಾಜ್ಯದಲ್ಲಿ 56 ರಷ್ಟು ಸಮೀಕ್ಷೆ ಪೂರ್ಣಗೊಂಡಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಸ್ಪಷ್ಟಪಡಿಸಿದ್ದಾರೆ.
ಶಿವಮೊಗ್ಗದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಜಾತಿ ಜಾತಿ ನಡುವೆ ಬೆಂಕಿ ಹಚ್ಚುತ್ತಿದ್ದಾರೆ ಎನ್ನುವ ಆರೋಪದ ವಿಚಾರವಾಗಿ ಬಿಜೆಪಿ ನಾಯಕರಿಗೆ ಈ ರೀತಿ ಹೇಳೋದಕ್ಕೆ ನಾಚಿಕೆ ಆಗಬೇಕು. ಸಂವಿಧಾನದ ಮೇಲೆ ಪ್ರಮಾಣ ಮಾಡಿ ಜಾತಿಗಣತಿ ವಿರೋಧಿಸುತ್ತಿದ್ದಾರೆ. ಈಗ ಶೇಕಡ 56 ರಷ್ಟು ಸಮೀಕ್ಷೆ ಆಗಿದೆ ಎಂದು ಸ್ಪಷ್ಟಪಡಿಸಿದರು.
ಸಾಮಾಜಿಕ ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಯಶಸ್ವಿ ಆಗಲಿದೆ. ಪ್ರಣಾಳಿಕೆಯಲ್ಲಿ ಜಾತಿ ಗಣತಿ ಮಾಡುವುದಾಗಿ ಉಲ್ಲೇಖ ಮಾಡಿದ್ದೆವು. ಯಡಿಯೂರಪ್ಪರಿಂದಲೇ ಜಾತಿಗಳ ನಡುವೆ ಭೇದ ಭಾವ ಆಗಿದ್ದು ಬಿ.ವೈ ವಿಜಯೇಂದ್ರ ಹಿಂದುಳಿದ ವರ್ಗದವರ ಅಭಿವೃದ್ಧಿ ಬೇಡವಾಗಿದೆ ಎಂದು ಶಿವಮೊಗ್ಗದಲ್ಲಿ ಬಿವೈ ವಿಜಯೇಂದ್ರ ವಿರುದ್ಧ ಸಚಿವ ಮಧು ಬಂಗಾರಪ್ಪ ವಾಗ್ದಾಳಿ ನಡೆಸಿದರು.