ಬೆಂಗಳೂರು : ಮಾಜಿ ಸಚಿವ, ಕಾಂಗ್ರೆಸ್ ಶಾಸಕ ಹೆಚ್.ವೈ. ಮೇಟಿ (79) ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದು, ಸಿಎಂ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ,ಮಾಜಿ ಸಚಿವರು, ಉತ್ತರ ಕರ್ನಾಟಕ ಭಾಗದ ಹಿರಿಯ ನಾಯಕರು, ಹಾಲಿ ಶಾಸಕರೂ ಆದ ಹೆಚ್.ವೈ.ಮೇಟಿ ಅವರ ನಿಧನವಾರ್ತೆ ನೋವುಂಟುಮಾಡಿದೆ. ಕಳೆದ ಗುರುವಾರವಷ್ಟೇ ಆಸ್ಪತ್ರೆಗೆ ಭೇಟಿನೀಡಿ, ಅವರ ಆರೋಗ್ಯ ವಿಚಾರಿಸಿದ್ದೆ. ಈ ವೇಳೆ ಗುಣಮುಖರಾಗಿ ಮತ್ತೆ ನಮ್ಮನ್ನು ಕೂಡಿಕೊಳ್ಳುತ್ತಾರೆ ಎನ್ನುವ ಭರವಸೆಯಿತ್ತು. ನನ್ನ ಭರವಸೆ, ಹಾರೈಕೆಗಳೆರೆಡೂ ಹುಸಿಯಾಗಿದೆ.
ಬಹುದೀರ್ಘ ಕಾಲ ಸಾರ್ವಜನಿಕ ಬದುಕಿನಲ್ಲಿದ್ದ ಮೇಟಿಯವರು ಜನಪರವಾಗಿ, ಕ್ಷೇತ್ರದ ಅಭಿವೃದ್ಧಿಯ ಬಗ್ಗೆಯಷ್ಟೇ ಚಿಂತಿಸುತ್ತಿದ್ದ ಮುತ್ಸದ್ದಿ ನಾಯಕರು. ಅವರ ನಿಧನದಿಂದ ಸಮಾಜ ಬಡವಾಗಿದೆ. ಮೃತರ ಆತ್ಮಕ್ಕೆ ಚಿರಶಾಂತಿ ದೊರಕಲಿ. ಮೇಟಿಯವರ ಕುಟುಂಬಸ್ಥರು ಹಾಗೂ ಅಭಿಮಾನಿಗಳಿಗೆ ಈ ದುಃಖ ಭರಿಸುವ ಶಕ್ತಿ ಸಿಗಲೆಂದು ಪ್ರಾರ್ಥಿಸುತ್ತೇನೆ ಎಂದು ಪೋಸ್ಟ್ ಮಾಡಿದ್ದಾರೆ.
ಮಾಜಿ ಸಚಿವರು, ಉತ್ತರ ಕರ್ನಾಟಕ ಭಾಗದ ಹಿರಿಯ ನಾಯಕರು, ಹಾಲಿ ಶಾಸಕರೂ ಆದ ಹೆಚ್.ವೈ.ಮೇಟಿ ಅವರ ನಿಧನವಾರ್ತೆ ನೋವುಂಟುಮಾಡಿದೆ. ಕಳೆದ ಗುರುವಾರವಷ್ಟೇ ಆಸ್ಪತ್ರೆಗೆ ಭೇಟಿನೀಡಿ, ಅವರ ಆರೋಗ್ಯ ವಿಚಾರಿಸಿದ್ದೆ. ಈ ವೇಳೆ ಗುಣಮುಖರಾಗಿ ಮತ್ತೆ ನಮ್ಮನ್ನು ಕೂಡಿಕೊಳ್ಳುತ್ತಾರೆ ಎನ್ನುವ ಭರವಸೆಯಿತ್ತು. ನನ್ನ ಭರವಸೆ, ಹಾರೈಕೆಗಳೆರೆಡೂ ಹುಸಿಯಾಗಿದೆ.… pic.twitter.com/Xd7fhsTxmG
— CM of Karnataka (@CMofKarnataka) November 4, 2025
		







