ನವದೆಹಲಿ: ಇಡಿ ವಿಚಾರಣೆ ಎದುರಿಸಿ ಸೋನಿಯಾ ಗಾಂಧಿಯವರು ಸದ್ಯ ಅವರು ಮನೆಯತ್ತ ತೆರಳಿದ್ದಾರೆ ಎನ್ನಲಾಗಿದೆ. ಕೋವಿಡ್ ಕಾರಣದಿಂದ ಅವರು ತಮಗೆ ಈ ಹಿಂದೆ ನೀಡಿದ್ದ ಇಡಿ ವಿಚಾರಣೆಗೆ ಅವರು ಮುಂದೂಡುವಂತೆ ಮನವಿ ಮಾಡಿದ್ದರು. ಅದರಂತೆ ಸೋನಿಯಾ ಗಾಂಧಿಯವರು ಸದ್ಯ ಕೋವಿಡ್ನಿಂದ ಗುಣಮುಖರಾಗಿದ್ದು, ಇಂದು ಇಡಿ ಮುಂದೆ ವಿಚಾರಣೆಗೆ ಹಾಜರಗಿದ್ದರು.
ಸೋನಿಯಾ ಗಾಂಧಿ ಅವರ ವಿಚಾರಣೆಯನ್ನು ಮಹಿಳಾ ಹೆಚ್ಚುವರಿ ನಿರ್ದೇಶಕಿ ನೇತೃತ್ವದ ಐವರು ಅಧಿಕಾರಿಗಳು ನಡೆಸಿದ್ದಾರೆ ಎನ್ನಲಾಗಿದೆ.
ವಿಚಾರಣೆಯ ಸಮಯದಲ್ಲಿ ಕಾಂಗ್ರೆಸ್ ಮುಖ್ಯಸ್ಥರು ಆಯಾಸಗೊಂಡರೆ ಅವರಿಗೆ ವಿಶ್ರಾಂತಿ ಪಡೆಯಲು ಅವಕಾಶ ನೀಡಲಾಗಿದೆ ಎಂದು ಜಾರಿ ನಿರ್ದೇಶನಾಲಯದ ಮೂಲಗಳು ತಿಳಿಸಿವೆ.
ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯ (ಪಿಎಂಎಲ್ಎ) ಕ್ರಿಮಿನಲ್ ಸೆಕ್ಷನ್ಗಳ ಅಡಿಯಲ್ಲಿ ಇಡಿ ಹೊಸ ಪ್ರಕರಣವನ್ನು ದಾಖಲಿಸಿದ ನಂತರ ಕಳೆದ ವರ್ಷದ ಕೊನೆಯಲ್ಲಿ ಸೋನಿಯಾ ಮತ್ತು ರಾಹುಲ್ ವಿರುದ್ಧ ವಿಚಾರಣೆ ಪ್ರಕ್ರಿಯೆಗಳನ್ನು ಪ್ರಾರಂಭಿಸಿದೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸೋನಿಯಾ ಗಾಂಧಿ ಅವರ ಪುತ್ರ ಮತ್ತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಇಡಿ ಈ ಹಿಂದೆ 50 ಗಂಟೆಗಳಿಗೂ ಹೆಚ್ಚು ಕಾಲ ಐದು ದಿನಗಳ ಕಾಲ ವಿಚಾರಣೆ ನಡೆಸಿತ್ತು. ನ್ಯಾಷನಲ್ ಹೆರಾಲ್ಡ್ ಪತ್ರಿಕೆಯ ಮಾಲೀಕತ್ವ ಹೊಂದಿರುವ ಕಾಂಗ್ರೆಸ್ ಪ್ರಾಯೋಜಿತ ‘ಯಂಗ್ ಇಂಡಿಯನ್ ಪ್ರೈವೇಟ್ ಲಿಮಿಟೆಡ್’ನಲ್ಲಿ ನಡೆದಿದೆ ಎನ್ನಲಾದ ಹಣಕಾಸು ಅವ್ಯವಹಾರಗಳಿಗೆ ಸಂಬಂಧಿಸಿದಂತೆ ಈ ತನಿಖೆ ನಡೆದಿದೆ.
ಈ ನಡುವೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಅವರಿಗೆ ಇಡಿ ಕಿರುಕುಳ ಹಾಗೂ ವಿಚಾರಣೆ ವಿರೋಧಿಸಿ ಇಂದು ಕಾಂಗ್ರೆಸ್ ನಾಯಕರಿಂದ ಬೃಹತ್ ಪ್ರತಿಭಟನೆ ನಡೆಸಿದರು. ಬಿಜೆಪಿ ವಿರುದ್ಧ ವಾಗ್ಧಾಳಿ ನಡೆಸಿದಂತ ನಾಯಕರು, ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಫ್ರೀಡಂ ಪಾರ್ಕ್ ನಲ್ಲಿ ಪೊಲೀಸರು ಹಾಕಿದ್ದಂತ ಬ್ಯಾರಿಗೇಡ್ ಹತ್ತಿ ಪ್ರತಿಭಟನೆ ಮುಂದುವರೆಸಲು ಯತ್ನಿಸಿದಾಗ ವಿಪಕ್ಷ ನಾಯಕ ಸಿದ್ಧರಾಮಯ್ಯ, ಡಿಕೆ ಶಿವಕುಮಾರ್ ಸೇರಿದಂತೆ ಹಲವು ಘಟಾನುಘಟಿ ಕಾಂಗ್ರೆಸ್ ನಾಯಕರನ್ನು ಪೊಲೀಸರು ವಶಕ್ಕೆ ಪಡೆದರು.
ಇಂದು ಬಿಜೆಪಿ ವಿರುದ್ಧ ಕಾಂಗ್ರೆಸ್ ನಾಯಕರ ರೋಷಾಗ್ನಿಯೇ ಸ್ಪೋಟಗೊಂಡಿತು. ಸೋನಿಯಾ ಗಾಂಧಿ, ರಾಹುಲ್ ಗಾಂಧಿಗೆ ಇಡಿ ಕಿರುಕುಳ ವಿರೋಧಿಸಿ ಇಂದು ನಡೆಸಿದಂತ ಪ್ರತಿಭಟನೆಯಲ್ಲಿ ಹಾದಿಯುದ್ಧಕ್ಕೂ ಬಿಜೆಪಿಯ ವಿರುದ್ಧ ದಳ್ಳುರಿಯೇ ಕಾರಲಾಯಿತು. ಬಿಜೆಪಿ ವಿರುದ್ಧ ಧಿಕ್ಕಾರ ಕೂಗಿದಂತ ಕಾಂಗ್ರೆಸ್ ನಾಯಕರು, ಫ್ರೀಡಂ ಪಾರ್ಕ್ ಗೆ ತರೆಳೋದನ್ನು ಪೊಲೀಸರು ಅರ್ಧಕ್ಕೆ ತಡೆದರು.
BIG NEWS: ರಾಜ್ಯದ ‘ಆರೋಗ್ಯ ಇಲಾಖೆ’ ‘ಗುತ್ತಿಗೆ ನೌಕರ’ರಿಗೆ ಭರ್ಜರಿ ಗುಡ್ ನ್ಯೂಸ್: ‘ವಾರದ ರಜೆ’ ಮಂಜೂರು