ನವದೆಹಲಿ : ರಾಜ್ಯಸಭಾ ಚುನಾವಣೆಗೆ ಸಂಬಂಧಿಸಿದಂತೆ ಎಲ್ಲಾ ಪಕ್ಷಗಳು ಅಭ್ಯರ್ಥಿಗಳ ಹೆಸರುಗಳನ್ನ ಘೋಷಿಸುತ್ತಿವೆ. ಮೂಲಗಳ ಪ್ರಕಾರ, ಸೋನಿಯಾ ಗಾಂಧಿ ರಾಜಸ್ಥಾನದಿಂದ ರಾಜ್ಯಸಭಾ ಚುನಾವಣೆಯಲ್ಲಿ ಸ್ಪರ್ಧಿಸಬಹುದು. ಸೋನಿಯಾ ಗಾಂಧಿ ಪ್ರಸ್ತುತ ಉತ್ತರ ಪ್ರದೇಶದ ರಾಯ್ ಬರೇಲಿಯ ಸಂಸದರಾಗಿದ್ದಾರೆ. ಮೂಲಗಳ ಪ್ರಕಾರ, ಈಗ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಅವರು ಸೋನಿಯಾ ಗಾಂಧಿ ಅವರ ಸ್ಥಾನದಿಂದ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಬಹುದು.
ಫೆಬ್ರವರಿ 26 ರಂದು 56 ರಾಜ್ಯಸಭಾ ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ಬಿಜೆಪಿ ಈಗಾಗಲೇ ತನ್ನ ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಿದೆ. ಆದರೆ ಕಾಂಗ್ರೆಸ್ ಇನ್ನೂ ಹೆಸರು ಪ್ರಕಟಿಸಿಲ್ಲ. ಮೂಲಗಳ ಪ್ರಕಾರ, ಸೋನಿಯಾ ಗಾಂಧಿ ಅವರು ರಾಜಸ್ಥಾನದಿಂದ ಕಾಂಗ್ರೆಸ್‌ನ ರಾಜ್ಯಸಭಾ ಅಭ್ಯರ್ಥಿಯಾಗಬಹುದು. ಅಭಿಷೇಕ್ ಮನು ಸಿಂಘ್ವಿ ಕರ್ನಾಟಕದಿಂದ ರಾಜ್ಯಸಭಾ ಅಭ್ಯರ್ಥಿಯಾಗಬಹುದಾದ್ರೆ, ಅಖಿಲೇಶ್ ಪ್ರಸಾದ್ ಸಿಂಗ್ ಬಿಹಾರದಿಂದ ಸ್ಪರ್ಧಿಸಬಹುದು. ಪಕ್ಷವು ಮತ್ತೊಮ್ಮೆ ಸೈಯದ್ ನಾಸಿರ್ ಹುಸೇನ್ ಮತ್ತು ಅಜಯ್ ಮಾಕನ್ ಅವರನ್ನು ರಾಜ್ಯಸಭಾ ಅಭ್ಯರ್ಥಿಗಳಾಗಿ ಘೋಷಿಸಬಹುದು. ಮಾಹಿತಿ ಪ್ರಕಾರ ಇನ್ನೆರಡು ದಿನಗಳಲ್ಲಿ ಕಾಂಗ್ರೆಸ್ ತನ್ನ ಅಭ್ಯರ್ಥಿಗಳ ಹೆಸರನ್ನ ಪ್ರಕಟಿಸಬಹುದು.
BREAKING : ‘UAE’ ಪ್ರವಾಸದ ಬಳಿಕ ಫೆ.14ರಂದು ಪ್ರಧಾನಿ ಮೋದಿ ‘ಕತಾರ್’ಗೆ ಭೇಟಿ
BREAKING: ಬಜೆಟ್ ಅಧಿವೇಶನ ಹಿನ್ನಲೆ: ಫೆ.14ರಂದು ‘ಕಾಂಗ್ರೆಸ್ ಶಾಸಕಾಂಗ ಪಕ್ಷ’ದ ಸಭೆ ನಿಗದಿ