ಬೆಂಗಳೂರು : ಕಾರ್ಯಕ್ರಮ ಒಂದರಲ್ಲಿ ಕನ್ನಡಿಗರ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದ ಖ್ಯಾತ ಗಾಯಕ ಸೋನು ನಿಗಮ್ ಕೊನೆಗೂ ಕನ್ನಡಿಗರ ಮುಂದೆ ಮಂಡಿಯೂರಿದ್ಧು, ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಕ್ಷಮಿಸು ಕರ್ನಾಟಕ ಎಂದು ಪೋಸ್ಟ್ ಹಾಕಿದ್ದಾರೆ ಕೊನೆಗೂ ಕನ್ನಡಿಗರಿಗೆ ಸೋನು ನಿಗಮ್ ಕ್ಷಮೆ ಕೇಳಿದ್ದಾರೆ.
ಹೌದು ಕನ್ನಡಿಗರ ಬಗ್ಗೆ ಸೋನು ನಿಗಮ್ ವಿವಾದಾತ್ಮಕ ಹೇಳಿಕೆ ನೀಡಿದರು ಈ ವಿಚಾರವಾಗಿ ಸೋನು ನಿಗಮ್ ಇದೀಗ ಕನ್ನಡಿಗರ ಕ್ಷಮೆ ಕೇಳಿದ್ದಾರೆ. ಇನ್ಸ್ಟಾಗ್ರಾಮ್ ನಲ್ಲಿ ಪೋಸ್ಟ್ ಮಾಡಿ ಸೋನು ನಿಗಮ್ ಕೊನೆಗೂ ಕ್ಷಮೆ ಕೇಳಿದ್ದಾರೆ. ಕನ್ನಡಿಗರ ಪ್ರೀತಿಗಿಂತ ನನ್ನ ಅಹಂ ದೊಡ್ಡದಲ್ಲ ಎಂದು ಬರೆದುಕೊಂಡಿದ್ದಾರೆ.
ಇದೇ ವಿಚಾರವಾಗಿ ಬೆಂಗಳೂರಲ್ಲಿ ಇಂದು ಕನ್ನಡ ಚಲನಚಿತ್ರ ವಾಣಿಜ್ಯ ಮಂಡಳಿ ಮಹತ್ವದ ಸಭೆ ನಡೆಸಿತ್ತು. ಈ ಒಂದು ಸಭೆಯಲ್ಲಿ ಸೋನು ನಿಗಮ್ ಅವರನ್ನು ಕನ್ನಡ ಚಲನಚಿತ್ರ ರಂಗದಿಂದ ಬ್ಯಾನ್ ಮಾಡಿ ನಿರ್ಧರಿಸಲಾಗಿತ್ತು. ಕರ್ನಾಟಕದ ಯಾವುದೇ ಕಾರ್ಯಕ್ರಮಗಳಿಗೆ ಸೋನು ನಿಗಮ್ ಕನ್ನಡ ಹಾಡು ಹಾಡುವಂತಿಲ್ಲ. ಹಾಗೂ ಅವರ ಜೊತೆಗೆ ಯಾರು ಯಾವುದೇ ಚಟುವಟಿಕೆ ನಡೆಸುವಂತಿಲ್ಲ ಎಂದು ಫಿಲಂ ಚೇಂಬರ್ ಅಧ್ಯಕ್ಷ ನರಸಿಂಹಲು ತಿಳಿಸಿದ್ದರು. ಇದಾದ ಬಳಿಕ ಇದೀಗ ಸೋನು ನಿಗಮ್ ಕನ್ನಡಿಗರ ಕ್ಷಮೆ ಕೇಳಿದ್ದಾರೆ.