ಬೆಂಗಳೂರು : ಮಹಿಳೆ ಕಿಡ್ನ್ಯಾಪ್ ಪ್ರಕರಣದಲ್ಲಿ ಎಸ್ ಐಟಿ ವಶದಲ್ಲಿರುವ ಮಾಜಿ ಸಚಿವ ಹೆಚ್. ಡಿ. ರೇವಣ್ಣ ಅವರನ್ನು ಕೆಲವೇ ಹೊತ್ತಿನಲ್ಲೇ ಜಡ್ಜ್ ಮುಂದೆ ಹಾಜರುಪಡಿಸಲಾಗುತ್ತದೆ.
ಬೆಂಗಳೂರಿನ ಕೋರಮಂಗಲದ ಎನ್ ಜಿವಿಯಲ್ಲಿರುವ ಜಡ್ಜ್ ನಿವಾಸದಲ್ಲಿ ಹೆಚ್. ಡಿ. ರೇವಣ್ಣ ಅವರನ್ನು ಹಾಜರುಪಡಿಸಲಾಗುತ್ತದೆ. ಹೀಗಾಗಿ ಜಡ್ಜ್ ನಿವಾಸಕ್ಕೆ ಬಿಗಿ ಪೊಲೀಸ್ ಬಂದೋಬಸ್ತ್ ನೀಡಲಾಗಿದೆ.
ಅತ್ಯಾಚಾರ ಹಾಗೂ ಅಪಹರಣ ಪ್ರಕರಣದಲ್ಲಿ ಜೆಡಿಎಸ್ ಶಾಸಕ ಎಚ್ ಡಿ ರೇವಣ್ಣ ಅವರನ್ನು ನಿನ್ನೆ ಎಸ್ಐಟಿ ಅಧಿಕಾರಿಗಳು ಬಂಧಿಸಿದ್ದು, ತಮ್ಮ ಕಚೇರಿಗೆ ಕರೆದುಕೊಂಡು ಬಂದು ವಿಚಾರಣೆ ನಡೆಸಿದ್ದಾರೆ.ಈ ವೇಳೆ ಅಧಿಕಾರಿಗಳ ಮುಂದೆ ಎಚ್ ಡಿ ರೇವಣ್ಣ ಅವರು ಕಿಡ್ನ್ಯಾಪ್ ಗೂ ನನಗೂ ಯಾವುದೇ ರೀತಿಯಾದ ಸಂಬಂಧವಿಲ್ಲ ಎಂದು ತಿಳಿಸಿದ್ದಾರೆ.
ತಡರಾತ್ರಿಯಾವರೆಗೂ ಎಸ್ಐಟಿ ಅಧಿಕಾರಿಗಳು ಹೆಚ್ಡಿ ರೇವಣ್ಣರನ್ನು ವಿಚಾರಣೆ ಮಾಡಿದ್ದು, ಕಿಡ್ನ್ಯಾಪ್ಗೂ ನನಗೂ ಸಂಬಂಧವಿಲ್ಲ. ತಾನು ಯಾರಿಗೂ ಕಿಡ್ನ್ಯಾಪ್ ಮಾಡಿ ಎಂದು ಹೇಳಿಲ್ಲ ಎಂದು ಮಾಹಿತಿ ನೀಡಿದ್ದಾರೆ.