ಬೆಂಗಳೂರು : ಇಂದು ಬೆಂಗಳೂರಿನ ಕೆಪಿಸಿಸಿ ಕಚೇರಿಯ ಭಾರತ್ ಜೋಡೋ ಭವನದಲ್ಲಿ ರಾಜ್ಯದ ಮಹಿಳಾ ಕಾಂಗ್ರೆಸ್ ನೂತನ ಅಧ್ಯಕ್ಷೆಯಾಗಿ ಸೌಮ್ಯ ರೆಡ್ಡಿ ಅವರು ಪದಗ್ರಹಣ ಮಾಡಿದರು.
ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸೌಮ್ಯ ರೆಡ್ಡಿ ಅವರು, ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಗ್ಯಾರಂಟಿ ಯೋಜನೆಗಳ ಜಾರಿ ಸೇರಿದಂತೆ ಅನೇಕ ಉತ್ತಮವಾದ ಕೆಲಸ ಮಾಡುತ್ತಿದೆ.ಶಕ್ತಿ ಯೋಜನೆಯಿಂದ ಗಾರ್ಮೆಂಟ್ಸ್ ನಲ್ಲಿ ಕೆಲಸ ಮಾಡುವ ಮಹಿಳೆಯರು ಸ್ವಾಭಿಮಾನದಿಂದ ಬಸ್ ನಲ್ಲಿ ಉಚಿತವಾಗಿ ಪ್ರಯಾಣ ಮಾಡುತ್ತಿದ್ದಾರೆ ಎಂದು ತಿಳಿಸಿದರು.
ಈ ಒಂದು ಶಕ್ತಿ ಯೋಜನೆ ಅಡಿಯಲ್ಲಿ ಕೆಲವು ಮಹಿಳೆಯರು ಗ್ರಂಥಾಲಯ ನಿರ್ಮಿಸಿದ್ದಾರೆ.ತಮ್ಮ ಮಗನಿಗೆ ಬೈಕ್ ಕೊಡಿಸಿದ್ದಾರೆ ಕೆಲವರು ಫ್ರಿಜ್, ಟಿವಿ, ಇನ್ನೂ ಅನೇಕ ಅನುಕೂಲಗಳನ್ನು ಪಡೆದಿದ್ದಾರೆ. ಮಹಿಳೆಯರಿಗೆ ಆರ್ಥಿಕವಾಗಿ, ಸಾಮಾಜಿಕ ಹಾಗೂ ರಾಜಕೀಯವಾಗಿ ಸರಿಯಾದ ಅವಕಾಶ ಕಲ್ಪಿಸುವ ನಿಟ್ಟಿನಲ್ಲಿ ನಮ್ಮ ಹೋರಾಟ ಮುಂದುವರಿಯಲಿದೆ ಎಂದು ತಿಳಿಸಿದರು.
ಸಮಾರಂಭದಲ್ಲಿ ಕೆಪಿಸಿಸಿ ಅಧ್ಯಕ್ಷರೂ ಆದ ಡಿಸಿಎಂ ಡಿ ಕೆ ಶಿವಕುಮಾರ್, ಸಿಎಂ ಸಿದ್ದರಾಮಯ್ಯ, ಸಚಿವರಾದ ಕೃಷ್ಣ ಬೈರೇಗೌಡ, ಲಕ್ಷ್ಮೀ ಹೆಬ್ಬಾಳ್ಕರ್, ಅಖಿಲ ಭಾರತ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಅಲ್ಕಾಲಂಬಾ, ಶಾಸಕ ಹ್ಯಾರಿಸ್, ಅಲ್ಲಂ ಪ್ರಭು ಪಾಟೀಲ್, ವಿಧಾನ ಪರಿಷತ್ತಿನ ಸದಸ್ಯ ಯು.ಬಿ ವೆಂಕಟೇಶ್, ಸಿಎಂ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್ ಮತ್ತಿತರರು ಉಪಸ್ಥಿತರಿದ್ದರು.
LIVE : ರಾಜ್ಯ ಮಹಿಳಾ ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ಶ್ರೀಮತಿ ಸೌಮ್ಯ ರೆಡ್ಡಿ ಅವರ ಪದಗ್ರಹಣ ಸಮಾರಂಭ https://t.co/sDDYnEgSys
— Karnataka Congress (@INCKarnataka) October 17, 2024