ಬೆಂಗಳೂರು : ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆಯುತ್ತಿರುವ ವಿಶೇಷ ಕ್ಯಾಬಿನೆಟ್ ಸಭೆಯ ಆರಂಭದಲ್ಲಿ, ಕಾಶ್ಮೀರದಲ್ಲಿ ಭಯೋತ್ಪಾದಕರ ದಾಳಿಗೆ ಬಲಿಯಾದವರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು.
ಮಹದೇಶ್ವರ ಬೆಟ್ಟದಲ್ಲಿ ಇದೇ ಮೊದಲ ಬಾರಿಗೆ ರಾಜ್ಯ ಸಚಿವ ಸಂಪುಟ ಸಭೆ ನಡೆಯುತ್ತಿದ್ದು, ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆಯುತ್ತಿರುವ ವಿಶೇಷ ಕ್ಯಾಬಿನೆಟ್ ಸಭೆಯ ಆರಂಭದಲ್ಲಿ, ಕಾಶ್ಮೀರದಲ್ಲಿ ಭಯೋತ್ಪಾದಕರ ದಾಳಿಗೆ ಬಲಿಯಾದವರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು.
ಸಚಿವ ಸಂಪುಟ ಸಭೆಯ ಸಭಾಂಗಣದ ಪಕ್ಕದಲ್ಲಿ ಸಿದ್ಧಪಡಿಸಿರುವ ಮಾಧ್ಯಮಗೋಷ್ಠಿ ಸ್ಥಳದಲ್ಲಿ ರಾಜಕುಮಾರ್ ಅವರ ಫೋಟೋ ಇಟ್ಟು ಪುಷ್ಪಾಲಂಕಾರ ಮಾಡಲಾಗಿದೆ. ಈ ಮೂಲಕ ಜನ್ಮದಿನದ ಅಂಗವಾಗಿ ವರನಟನನ್ನು ಗೌರವಿಸುವ ಕೆಲಸವನ್ನು ಸರ್ಕಾರ ಮಾಡಿದೆ. ಡಾ.ರಾಜ್ ಕುಮಾರ್ ಅವರು ಚಾಮರಾಜನಗರ ಜಿಲ್ಲೆಯವರೇ ಆಗಿದ್ದರಿಂದ ಚಾಮರಾಜನಗರದಲ್ಲಿ ನಡೆಯುತ್ತಿರುವ ಸಚಿವ ಸಂಪುಟ ಸಭೆ ಹಿನ್ನೆಲೆಯಲ್ಲಿ ಈ ವೇಶೇಷ ಗೌರವ ನಮನ ಸಲ್ಲಿಸಲಾಗಿದೆ.
ಚಾಮರಾಜನಗರ ಜಿಲ್ಲೆಯ ಮಲೆಮಹದೇಶ್ವರ ಬೆಟ್ಟದಲ್ಲಿ ಇದೇ ಮೊದಲ ಬಾರಿಗೆ ಐತಿಹಾಸಿಕ ಸಚಿವ ಸಂಪುಟ ಸಭೆ ಇಂದು ನಡೆಯುತ್ತಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆಯಲಿರುವ ಸಭೆಯಲ್ಲಿ ಚಾಮರಾಜನಗರ ಸೇರಿದಂತೆ ಸುತ್ತಲಿನ ಜಿಲ್ಲೆಗಳಿಗೆ ಸಂಬಂಧಿಸಿದ 25ಕ್ಕೂ ಹೆಚ್ಚು ನೀರಾವರಿ ಯೋಜನೆಗಳಿಗೆ ಅನುಮೋದನೆ ನೀಡುವ ಸಾಧ್ಯತೆ ಇದೆ.