ಕಲಬುರ್ಗಿ : ಶಾರ್ಟ್ ಸರ್ಕ್ಯೂಟ್ ನಿಂದ ಕನ್ನಡಕದ ಅಂಗಡಿಯೊಂದು ಹೊತ್ತಿ ಉರಿದಿದೆ. ಈ ವೇಳೆ ಅಂಗಡಿಯಲ್ಲಿದ್ದಂತಹ ಲಕ್ಷಾಂತರ ಮೌಲ್ಯದ ವಸ್ತುಗಳು ಸುಟ್ಟು ಕರಕಲಾಗಿರುವ ಘಟನೆ ಕಲಬುರ್ಗಿ ನಗರದ ಬಿಗ್ ಬಜಾರ್ ಎದುರುಗಡೆ ಈ ಒಂದು ಅಗ್ನಿ ಅವಘಡ ಸಂಭವಿಸಿದೆ.
ಹೌದು ನಗರದ ಕೇಂದ್ರ ಭಾಗದಲ್ಲಿರುವಂತಹ ಬಿಗ್ ಬಜಾರ್ ಎದುರುಗಡೆ ಇರುವ AEIS ಆಪ್ಟಿಕಲ್ ಅಂಗಡಿಯಲ್ಲಿ ಈ ಒಂದು ಅಗ್ನಿ ದುರಂತ ಸಂಭವಿಸಿದೆ ಶಾರ್ಟ್ ಸರ್ಕ್ಯೂಟ್ ನಿಂದ ಅಗ್ನಿ ಅವಘಡ ಸಂಭವಿಸಿದೆ ಎಂದು ಶಂಕಿಸಲಾಗಿದ್ದು ಕೂಡಲೇ ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳ ಸಿಬ್ಬಂದಿ ಬಂದು ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದು ಬ್ರಹ್ಮಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.