ಬೆಂಗಳೂರು : ಕರ್ನಾಟಕದಲ್ಲಿ ಸಂಚಲನ ಸೃಷ್ಟಿ ಮಾಡಿದ್ದ ಬಿಟ್ ಕಾಯಿನ್ ಪ್ರಕರಣದ ಆರೋಪಿ ಶ್ರೀಕಿ ಅಲಿಯಾಸ್ ಶ್ರೀಕೃಷ್ಣನನ್ನು ಪೊಲೀಸರು ಕೊನೆಗೂ ಬಂಧಿಸಿದ್ದಾರೆ.
2017ರಲ್ಲಿ ತುಮಕೂರು ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಯುನೋ ಕಾಯಿನ್ ಕಳವು ಪ್ರಕರಣದಲ್ಲಿ ಶ್ರೀಕಿಯನ್ನು ಸಿಐಡಿ ವಿಶೇಷ ತನಿಖಾ ಅಧಿಕಾರಿಗಳು ಬಂಧಿಸಿದ್ದಾರೆ. ಪ್ರಕರಣ ಎಸ್ಐಟಿಗೆ ವರ್ಗಾವಣೆ ಆಗಿತ್ತು.
ಈ ಪ್ರಕರಣವನ್ನು ಸಿಸಿಬಿ ಪೊಲೀಸರು ತನಿಖೆ ನಡೆಸಿ, ಆರೋಪಿಯನ್ನು ಬಂಧಿಸಿದ್ದರು.ಬಳಿಕ ಜಾಮೀನಿನ ಮೇಲೆ ಹೊರಗಡೆ ಬಂದಿದ್ದನು. ಸಿಐಡಿ ಅಧಿಕಾರಿಗಳು ಆರೋಪಿ ಶ್ರೀಕಿ ಸಿಐಡಿ ತನಿಖೆಗೆ ಹಾಜರಾಗದೆ ಕಳ್ಳಾಟವಾಡುತ್ತಿದ್ದನು.ಸಿಐಡಿ ಪೊಲೀಸರು 5-6 ಬಾರಿ ನೋಟಿಸ್ ನೀಡಿದರೂ ಶ್ರೀಕಿ ವಿಚಾರಣೆಗೆ ಹಾಜರಾಗುತ್ತಿಲ್ಲ. ಇದೀಗ ಸಿಐಡಿ ಅಧಿಕಾರಿಗಳು ಶ್ರೀಕಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.