ಬೆಂಗಳೂರು : ಕರ್ನಾಟಕದಲ್ಲಿ ಸಂಚಲನ ಸೃಷ್ಟಿ ಮಾಡಿದ್ದ ಬಿಟ್ ಕಾಯಿನ್ ಪ್ರಕರಣದ ಆರೋಪಿ ಶ್ರೀಕಿ ಅಲಿಯಾಸ್​ ಶ್ರೀಕೃಷ್ಣನನ್ನು ಪೊಲೀಸರು ಕೊನೆಗೂ ಬಂಧಿಸಿದ್ದಾರೆ.

2017ರಲ್ಲಿ ತುಮಕೂರು ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಯುನೋ ಕಾಯಿನ್​ ಕಳವು ಪ್ರಕರಣದಲ್ಲಿ ಶ್ರೀಕಿಯನ್ನು ಸಿಐಡಿ ವಿಶೇಷ ತನಿಖಾ ಅಧಿಕಾರಿಗಳು ಬಂಧಿಸಿದ್ದಾರೆ. ಪ್ರಕರಣ ಎಸ್​ಐಟಿಗೆ ವರ್ಗಾವಣೆ ಆಗಿತ್ತು.

ಈ ಪ್ರಕರಣವನ್ನು ಸಿಸಿಬಿ ಪೊಲೀಸರು ತನಿಖೆ ನಡೆಸಿ, ಆರೋಪಿಯನ್ನು ಬಂಧಿಸಿದ್ದರು.ಬಳಿಕ ಜಾಮೀನಿನ ಮೇಲೆ ಹೊರಗಡೆ ಬಂದಿದ್ದನು. ಸಿಐಡಿ ಅಧಿಕಾರಿಗಳು ಆರೋಪಿ ಶ್ರೀಕಿ ಸಿಐಡಿ ತನಿಖೆಗೆ ಹಾಜರಾಗದೆ ಕಳ್ಳಾಟವಾಡುತ್ತಿದ್ದನು.ಸಿಐಡಿ ಪೊಲೀಸರು 5-6 ಬಾರಿ ನೋಟಿಸ್ ನೀಡಿದರೂ ಶ್ರೀಕಿ ವಿಚಾರಣೆಗೆ ಹಾಜರಾಗುತ್ತಿಲ್ಲ. ಇದೀಗ ಸಿಐಡಿ ಅಧಿಕಾರಿಗಳು ಶ್ರೀಕಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

Share.
Exit mobile version