ಬೆಂಗಳೂರು : ನೆಲಮಂಗಲದ ತಾಲೂಕಿನ ಶಿವಗಂಗೆಯಲ್ಲಿರುವ ಶೃಂಗೇರಿ ಶಾಖಾ ಮಠದ ಪುರುಷೋತ್ತಮ ಭಾರತೀ ಸ್ವಾಮೀಜಿ (75) ವಿಧಿವಶರಾಗಿದ್ದಾರೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಶಿವಗಂಗೆಯಲ್ಲಿರುವ ಶಾಖಾ ಮಠದ ಪುರುಷೋತ್ತಮ ಭಾರತೀ ಸ್ವಾಮೀಜಿಗಳು ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದರು. ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ಶ್ರೀಗಳನ್ನು ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ವಿಧಿವಶರಾಗಿದ್ದಾರೆ. ಇಂದು ಮಧ್ಯಾಹ್ನ 2 ಗಂಟೆಗೆ ಮಠದ ಆವರಣದಲ್ಲಿ ಅಂತ್ಯಕ್ರಿಯೆ ನಡೆಯಲಿದೆ.








