ಬೆಂಗಳೂರು : ರಾಜ್ಯದ ಲಕ್ಷಾಂತರ ವಿದ್ಯಾರ್ಥಿಗಳು ಹಾಗೂ ಪೋಷಕರು ಕಾತುರದಿಂದ ಕಾಯುತ್ತಿದ್ದ 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ- 1 ರ ಫಲಿತಾಂಶ ಪ್ರಕಟಗೊಂಡಿದೆ. ಎಸ್ ಎಸ್ ಎಲ್ ಸಿ ಅಲ್ಲಿ ಶೇಕಡ 90ರಷ್ಟು ಈ ಬಾರಿ ಫಲಿತಾಂಶ ದಾಖಲಾಗಿದೆ. ಮಾರ್ಚ್ 18ರಿಂದ ಏಪ್ರಿಲ್ 2 ರವರೆಗೆ ಎಸ್ ಎಸ್ ಎಲ್ ಸಿ ಪರೀಕ್ಷೆಗಳು ನಡೆದಿದ್ದವು ವಿದ್ಯಾರ್ಥಿಗಳ ನೊಂದಾಯಿತ ಮೊಬೈಲ್ ಸಂಖ್ಯೆಗೆ ಎಸ್ಎಂಎಸ್ ಮೂಲಕ ಫಲಿತಾಂಶ ರವನಿಸಲಾಗುತ್ತದೆ.
ಇನ್ನು ಈ ಬಾರಿಯೂ ಕೂಡ ಬಾಲಕಿಯರೇ ಮೇಲುಗೈ ಸಾಧಿಸಿದ್ದು 625 ಕ್ಕೆ 625 ಅಂಕಗಳನ್ನು 7 ವಿದ್ಯಾರ್ಥಿಗಳು ಗಳಿಸಿದ್ದಾರೆ. ಬೆಳಗಾವಿಯ ರೂಪ ಚೆನ್ನಗೌಡ ಪಾಟೀಲ್ ಗೆ 625ಕ್ಕೆ 625 ಹಾಸನದ ಜಾನವಿ ಹಾಗೂ ಉತ್ಸವ್ ಪಾಟೀಲ್ 625 ಕ್ಕೆ 625 ಅಂಕಗಳು ಪಡೆದಿದ್ದಾರೆ ಎಂದು ತಿಳಿದುಬಂದಿದೆ. ಇನ್ನು ದಾವಣಗೆರೆಯ ಭರತ್, ಚಿಕ್ಕಮಂಗಳೂರಿನ ಬೃಂದಾ, ಬೆಂಗಳೂರು ಉತ್ತರದ ಧನುಷ್, ಉಡುಪಿಯ ಪ್ರೀತಂ ಚಿಕ್ಕೋಡಿಯ ಪ್ರಾರ್ಥನಾ, ವಿಜಯಪುರದ ಸೌಜನ್ಯ, ರಾಯಚೂರಿನ ಸುಖದೇವ್ ರಾಜ್ಯಕ್ಕೆ ಟಾಪರ್ ಆಗಿ ಹೊರಹೊಮ್ಮಿದ್ದಾರೆ.
ಈ ವರ್ಷದ ವಿಶೇಷತೆ ಡಿಜಿಲಾಕರ್‌ನಲ್ಲಿ ಅಂಕಪಟ್ಟಿ ಲಭ್ಯ!
ಈ ವರ್ಷ ಮಂಡಳಿಯು ಪ್ರಥಮ ಬಾರಿಗೆ ವಿಶೇಷ ಹೆಜ್ಜೆಯೊಂದನ್ನು ಇಟ್ಟಿದ್ದು, ವಿದ್ಯಾರ್ಥಿಗಳ ಅಧಿಕೃತ ಅಂಕಪಟ್ಟಿಯನ್ನು ಫಲಿತಾಂಶ ಪ್ರಕಟವಾದ ತಕ್ಷಣವೇ ‘ಡಿಜಿಲಾಕರ್’ನಲ್ಲಿ ಲಭ್ಯವಾಗುವಂತೆ ಮಾಡಿದೆ.
ಮಧ್ಯಾಹ್ನ 12 ಕ್ಕೆ ಅಂಕಪಟ್ಟಿ ಲಭ್ಯ
ವಿದ್ಯಾರ್ಥಿಗಳು ಮಧ್ಯಾಹ್ನ 12 ಗಂಟೆಯ ನಂತರ https://www.digilocker.gov.in ವೆಬ್‌ಸೈಟ್‌ಗೆ ಭೇಟಿ ನೀಡಿ ತಮ್ಮ ಅಂಕಪಟ್ಟಿಯನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು
ಹಿಂದಿ ಸೇರಿ ತೃತೀಯ ಭಾಷೆಗೆ ಅಂಕ ಅಥವಾ ಗ್ರೇಡ್?
ಪ್ರಸಕ್ತ ವರ್ಷದಿಂದಲೇ ಹಿಂದಿ ಸೇರಿ ತೃತೀಯ ಭಾಷೆಗೆ ಅಂಕದ ಬದಲು ಗ್ರೇಡ್ ನೀಡಲು ಶಿಕ್ಷಣ ಇಲಾಖೆ ಮುಂದಾಗಿತ್ತು. ಈ ಬಗ್ಗೆ ಹೈಕೋರ್ಟ್‌ನಿಂದ ತಡೆ ನೀಡಿದ್ದು, ಗ್ರೇಡ್ ಬೇಡ ಅಂಕ ನೀಡಲು ಆದೇಶಿಸಲಾಗಿತ್ತು. ಹೀಗಾಗಿ, ಈ ವರ್ಷ ಅಂಕ ನೀಡಲಾಗುತ್ತಿದೆ. 625 ಅಂಕಗಳಿಗೆ ಫಲಿತಾಂಶ ಪ್ರಕಟವಾಗಲಿದೆ. ತೃತೀಯ ಭಾಷೆ ಪಾಸ್ ಆಗುವುದ ಕಡ್ಡಾಯವಾಗಿದೆ. ಮುಂದಿನ ವರ್ಷದಿಂದ ಗ್ರೇಡ್ ನಿಯಮವನ್ನು ಜಾರಿಗೆ ತರುವ ಸಾಧ್ಯತೆ ಇದೆ.








