ಬೆಳಗಾವಿ : ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಫೇಲ್ ಆಗುವ ಆತಂಕದಿಂದ ವಿದ್ಯಾರ್ಥಿನಿಯೊಬ್ಬಳು ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ.ಬೆಳಗಾವಿಯ ವಿಶ್ವೇಶ್ವರಯ್ಯ ನಗರದ ಫಾರೆಸ್ಟ್ ಕಾಲೋನಿಯಲ್ಲಿ ವಿದ್ಯಾರ್ಥಿನಿ ದೀಪಿಕಾ ಬಡಿಗೇರ್ ಫೇಲ್ ಅಗುವ ಆತಂಕದಿಂದ ಆತ್ಮಹತ್ಯೆಗೆ ಶರಣಾಗಿದ್ದಾಳೆ.
ಮಾ.25ರಂದು ಎಸ್‌ಎಸ್ ಎಲ್ ಸಿ ಪರೀಕ್ಷೆ ಬರೆದು ಬಂದಿದ್ದ ದೀಪಿಕಾ ಕಡಿಮೆ ಅಂಕ ಬರಬಹುದು ಎಂಬ ಆತಂಕದಿಂದ ಮನೆಯಲ್ಲಿ ಯಾರೂ ಇಲ್ಲದ ವೇಳೆ ಆತ್ಮಹತ್ಯೆಗೆ ಶರಣಾಗಿದ್ದಾಳೆ ಎನ್ನಲಾಗಿದೆ.ದೀಪಿಕ ಸಾವಿನಿಂದ ಪೋಷಕರ ಆಕ್ರಂದನ ಮುಗಿಲುಮುಟ್ಟಿದ್ದು, ಘಟನಾ ಸ್ಥಳಕ್ಕೆ ಎಪಿಎಂಸಿ ಠಾಣೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.