ಶಿವಮೊಗ್ಗ : ಕೀಟನಾಶಕ ಸೇವಿಸಿ ಎಸ್ ಎಸ್ ಎಲ್ ಸಿ ವಿದ್ಯಾರ್ಥಿ ಒಬ್ಬ ಅಸ್ವಸ್ಥಗೊಂಡಿದ್ದ, ಆದರೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಚಿಕ್ಕಮಣತಿ ಗ್ರಾಮದಲ್ಲಿ ನಡೆದಿದೆ.
ಹೌದು ಕೀಟನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಯನ್ನು ಅನುದೀಪ್ (16) ಎಂದು ತಿಳಿದುಬಂದಿದೆ. ಕಳೆದ ಒಂದು ತಿಂಗಳ ಹಿಂದೆ ಆತ ಕೀಟನಾಶಕ ಸೇವಿಸಿದ್ದತಕ್ಷಣ ಆತನನ್ನು ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು ಎಂದು ಹೇಳಲಾಗುತ್ತಿದೆ.
ಆದರೆ ಇಂದು ಬೆಳಿಗ್ಗೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾನೆ. ವಿದ್ಯಾರ್ಥಿ ಯಾಕೆ ಆತ್ಮಹತ್ಯೆ ಮಾಡಿಕೊಂಡ ಎಂಬುದರ ಕುರಿತು ಇನ್ನು ಸ್ಪಷ್ಟವಾದ ಕಾರಣ ತಿಳಿದು ಬಂದಿಲ್ಲ. ಘಟನೆಗೆ ಸಂಬಂಧಿಸಿದಂತೆ ಹೊಸನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.