ಬೆಂಗಳೂರು : ರಾಜ್ಯದಲ್ಲಿ ವಿದ್ಯಾರ್ಥಿಗಳ ಆತ್ಮಹತ್ಯೆ ಪ್ರಕರಣಗಳು ಹೆಚ್ಚುತ್ತಿದ್ದು, ಬೆಂಗಳೂರಿನಲ್ಲಿ ಎಸ್ ಎಸ್ ಎಲ್ ವಿದ್ಯಾರ್ಥಿನಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಬೆಂಗಳೂರಿನ ಹನುಮಂತ ನಗರದ ಶ್ರೀ ನಗರದಲ್ಲಿ ಎಸ್ ಎಸ್ ಎಲ್ ಸಿ ವ್ಯಾಸಂಗ ಮಾಡುತ್ತಿದ್ದ ಭೂಮಿಕಾ ಎಂಬ ಬಾಲಕಿ ಆತ್ಮಹತ್ಯೆ ಮಾಡಿಕೊಂಡಿದ್ದು, ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.
ಪರೀಕ್ಷೆಗೆ ಓದಲು ರೂಮ್ ಗೆ ತೆರಳಿದ್ದ ವಿದ್ಯಾರ್ಥಿನಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಈ ಸಂಬಂಧ ಹನುಮಂತ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತಂಗಿಯ ಮುಂದೆಯೇ 13 ವರ್ಷದ ಅಣ್ಣ ಆತ್ಮಹತ್ಯೆ.!
ಬೆಂಗಳೂರಿನ ಬ್ಯಾಡರಹಳ್ಳಿ ಪೊಲೀಸ್ ಠಾಣೆಯ ಗೊಲ್ಲರಹಟ್ಟಿಯ ರತ್ನನಗರದಲ್ಲಿ ಧ್ರುವ (13) ಎಂಬ ಬಾಲಕ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. 9 ವರ್ಷದ ತಂಗಿಯ ಮುಂದೆಯೇ ಉಡದಾರದಿಂದ ನೆಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಬಾಲಕನ ತಂದೆ ಬೇಕರಿಯಲ್ಲಿ ಕೆಲಸ ಮಾಡುತ್ತಿದ್ದು, ತಾಯಿ ಗಾರ್ಮೆಂಟ್ಸ್ ನಲ್ಲಿ ಕೆಲಸ ಮಾಡುತ್ತಿದ್ದರು. ಬಾಲಕ ಉಡುದಾರದಿಂದ ನೇಣು ಹಾಕಿಕೊಂಡಿದ್ದು, ಈ ವೇಳೆ ಅದು ತುಂಡಾಗಿ ಕೆಳಗೆ ಬಿದ್ದಿದ್ದಾನೆ. ವಿಷಯ ತಿಳಿದ ಪೋಷಕರು ಕೂಡಲೇ ಬಾಲಕನನ್ನು ಆಸ್ಪತ್ರೆಗೆ ದಾಖಲಿಸಲು ಮುಂದಾಗಿದ್ದಾರೆ. ಆದರೆ ಅಷ್ಟರಲ್ಲೇ ಬಾಲಕ ಮೃತಪಟ್ಟಿದ್ದಾನೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.