ಬೆಳಗಾವಿ : ಖಾಸಗಿ ಆಸ್ಪತ್ರೆಯಲ್ಲಿ ನೌಕರ ಒಬ್ಬ ಯಾರು ಇಲ್ಲದ ವೇಳೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿ ಜಿಲ್ಲೆಯ ಗೋಕಾಕ್ ಪಟ್ಟಣದಲ್ಲಿ ನಡೆದಿದೆ.
ಬೆಳಗಾವಿ ಜಿಲ್ಲೆಯ ಗೋಕಾಕ್ ನ ಆಜರಿ ಸರ್ಜಿಕಲ್ ಹಾಸ್ಪಿಟಲ್ ನಲ್ಲಿ ಈ ಒಂದು ಘಟನೆ ನಡೆದಿದೆ. ಸುಭಾಷ್ (32) ಆತ್ಮಹತ್ಯೆ ಮಾಡಿಕೊಂಡಂತಹ ವ್ಯಕ್ತಿ ಎಂದು ತಿಳಿದುಬಂದಿದೆ.ಭಾನುವಾರ ರಜೆ ಇದ್ದರೂ ಕೂಡ ಸುಭಾಷ್ ಆಸ್ಪತ್ರೆಯಲ್ಲೇ ಉಳಿದಿದ್ದ.
ಆಸ್ಪತ್ರೆಯಲ್ಲಿ ಯಾರು ಇಲ್ಲದ ವೇಳೆ ಸುಭಾಷ್ ನೇಣಿಗೆ ಶರಣಾಗಿದ್ದಾನೆ. ಆತ್ಮಹತ್ಯೆಗೆ ಇದುವರೆಗೂ ನಿಖರವಾದಂತ ಕಾರಣ ತಿಳಿದು ಬಂದಿಲ್ಲ. ಘಟನೆ ಕುರಿತು ಗೋಕಾಕ್ ಶಹರ ಪೊಲೀಸ್ ಠಾಣೆಯಲ್ಲಿ ಈ ಒಂದು ಪ್ರಕರಣ ದಾಖಲಾಗಿದೆ.