ಮುಂಬೈ : : ಮುಂಬೈನ ಬಾಂದ್ರಾ ರೈಲು ನಿಲ್ದಾಣದಲ್ಲಿ ಭಾನುವಾರ ಬೆಳಗ್ಗೆ ರೈಲು ಹತ್ತಲು ಯತ್ನಿಸುತ್ತಿದ್ದ ವೇಳೆ ನೂಕುನುಗ್ಗಲು ಉಂಟಾಗಿ ಒಂಬತ್ತು ಮಂದಿ ಗಾಯಗೊಂಡಿದ್ದಾರೆ ಎಂದು ನಾಗರಿಕ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
Maharashtra | Due to rush on platform number 1 of Bandra Terminus, 9 people have been injured in a stampede. Injured passengers have been shifted to a hospital: BMC
— ANI (@ANI) October 27, 2024
ಬಾಂದ್ರಾ-ಗೋರಖ್ಪುರ ಎಕ್ಸ್ಪ್ರೆಸ್ಗೆ (ರೈಲು ಸಂಖ್ಯೆ 22921) ರಶ್ನಲ್ಲಿ ಪ್ಲಾಟ್ಫಾರ್ಮ್ ನಂಬರ್ ಒಂದರಲ್ಲಿ ಬೆಳಿಗ್ಗೆ 5.56 ಕ್ಕೆ ಈ ಘಟನೆ ಸಂಭವಿಸಿದೆ ಎಂದು ಬೃಹನ್ಮುಂಬೈ ಮುನ್ಸಿಪಲ್ ಕಾರ್ಪೊರೇಶನ್ನ ಅಧಿಕಾರಿ ವರದಿ ಮಾಡಿದ್ದಾರೆ. ಗಾಯಾಳುಗಳನ್ನು ಕೂಡಲೇ ಭಾಭಾ ಆಸ್ಪತ್ರೆಗೆ ಚಿಕಿತ್ಸೆಗಾಗಿ ಕರೆದೊಯ್ಯಲಾಯಿತು.