ಬೆಂಗಳೂರು: ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾಗಿದ್ದ ಮಾಜಿ ಸಂಸದ ಕೆ. ಜಯಪ್ರಕಾಶ್ ಹೆಗ್ಡೆ ಅವರು ಕಾಂಗ್ರೆಸ್ ಸೇರ್ಪಡೆಯಾಗುವುದು ಬಹುತೇಕ ಖಚಿತವಾಗಿದೆ ಎಂದು ತಿಳಿದುಬಂದಿದೆ.ಅಲ್ಲದೆ ಬಿಜೆಪಿ, ಜೆಡಿಎಸ್ನ ಹಲವು ಪ್ರಮುಖರು 2 -3 ದಿನಗಳಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ ಎನ್ನಲಾಗುತ್ತಿದೆ.
ಇನ್ನುಮುಂದೆ ಎಲ್ಲ ನೌಕರರ ಆಸ್ತಿ ಘೋಷಣೆ ಕಡ್ಡಾಯ : ರಾಜ್ಯ ಸರ್ಕಾರಕ್ಕೆ ಆಡಳಿತ ಸುಧಾರಣಾ ಆಯೋಗ ಶಿಫಾರಸ್ಸು!
ಉಡುಪಿ – ಚಿಕ್ಕಮಗಳೂರು ಲೋಕಸಭಾ ಕಾಂಗ್ರೆಸ್ ಅಭ್ಯರ್ಥಿಯಾಗುವ ನಿರೀಕ್ಷೆಯಿದೆ. ಮಂಡ್ಯ ಜಿಲ್ಲೆಯ ಹಲವು ಬಿಜೆಪಿ ಮತ್ತು ಜೆಡಿಎಸ್ ನಾಯಕರೂ ಕಾಂಗ್ರೆಸ್ ಸೇರ್ಪಡೆಯಾಗುತ್ತಿದ್ದಾರೆ. ಜಿಲ್ಲೆಯ ಮಾಜಿ ಸಚಿವ, ಮಾಜಿ ಶಾಸಕ ಹಾಗೂ ವಿಧಾನ ಪರಿಷತ್ ಮಾಜಿ ಸದಸ್ಯರೊಬ್ಬರ ಸೇರ್ಪಡೆಗೆ ವೇದಿಕೆ ಸಿದ್ದವಾಗಿದೆ.
ಬೆಂಗಳೂರಿನಲ್ಲಿ ನೀರಿನ ಕೊರತೆ: ಖಾಸಗಿ ನೀರಿನ ಟ್ಯಾಂಕರ್ಗಳನ್ನು ವಶಕ್ಕೆ ಪಡೆಯಲು ಸರ್ಕಾರ ಚಿಂತನೆ
ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ಇದೀಗ ರಾಜ್ಯದಲ್ಲಿ ಪಕ್ಷಾಂತರ ಪರ್ವ ಶುರುವಾಗಿದೆ.ಮುಂದಿನ 2 -3 ದಿನಗಳಲ್ಲಿ ಒಟ್ಟಿಗೇ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ. ಶಿವಕುಮಾರ್ ಸಮ್ಮುಖದಲ್ಲಿ ಪಕ್ಷ ಸೇರಲಿದ್ದಾರೆ ಎಂದು ಕಾಂಗ್ರೆಸ್ ಉನ್ನತ ಮೂಲಗಳು ತಿಳಿಸಿವೆ.
ಉದ್ಯೋಗಾಕಾಂಕ್ಷಿಗಳೇ ಗಮನಿಸಿ : ನಾಳೆಯಿಂದ 1,000 ʻಗ್ರಾಮ ಆಡಳಿತ ಅಧಿಕಾರಿ’ ನೇಮಕಾತಿಗೆ ಅರ್ಜಿ ಸಲ್ಲಿಕೆ ಆರಂಭ!