ಹುಬ್ಬಳ್ಳಿ : ಲೋಕಸಭೆ ಚುನಾವಣೆ ಹೊತ್ತಲ್ಲೇ ಬಿಜೆಪಿಗೆ ಬಿಗ್ ಶಾಕ್, ವಿಧಾನಪರಿಷತ್ ಸದಸ್ಯ ಸ್ಥಾನಕ್ಕೆ ಕೆ.ಪಿ.ನಂಜುಂಡಿ ಇಂದು ರಾಜೀನಾಮೆ ಸಲ್ಲಿಸಿದ್ದಾರೆ.

ವಿಧಾನಸಭೆಯಿಂದ ವಿಧಾನಪರಿಷತ್‌ ಸದಸ್ಯ ಸ್ಥಾನಕ್ಕೆ ಚುನಾಯಿತರಾಗಿರುವ ಕೆ.ಪಿ. ನಂಜುಂಡಿ ಅವರ ಪರಿಷತ್‌ ಸದಸ್ಯತ್ವ ಅವಧಿ ಜೂನ್‌ 17ಕ್ಕೆ ಮುಗಿಯಲಿದೆ. ಈ ಹಿನ್ನೆಲೆಯಲ್ಲಿ ಇಂದು ವಿಧಾನಪರಿಷತ್‌ ಸಭಾಪತಿ ಬಸವರಾಜ ಹೊರಟ್ಟಿ ಅವರಿಗೆ ರಾಜೀನಾಮೆ ಸಲ್ಲಿಸಿದ್ದಾರೆ.

ಬಿಜೆಪಿ ವಿಶ್ವಕರ್ಮ ಸೇರಿದಂತೆ ಹಿಂದುಳಿದ ವರ್ಗಗಳ ಸಮುದಾಯದವರಿಗೆ ಅನ್ಯಾಯ ಮಾಡಿದೆ ಎಂಬುದಾಗಿ ಕೋಪಗೊಂಡಿರುವಂತ ಪರಿಷತ್ ಸದಸ್ಯ ಕೆ.ಪಿ ನಂಜುಂಡಿ ಅವರು ಇಂದು ಕಾಂಗ್ರೆಸ್ ಪಕ್ಷವನ್ನು ಸೇರ್ಪಡೆಗೊಳ್ಳಲಿದ್ದಾರೆ.
ಈಗಾಗಲೇ ಡಿಸಿಎಂ ಡಿ.ಕೆ ಶಿವಕುಮಾರ್ ಅವರ ನಿವಾಸಕ್ಕೆ ಭೇಟಿಯಾಗಿ ಕಾಂಗ್ರೆಸ್ ಪಕ್ಷ ಸೇರ್ಪಡೆಯ ಬಗ್ಗೆಯೂ ಬಿಜೆಪಿ ವಿಧಾನಪರಿಷತ್ ಸದಸ್ಯ ಕೆ.ಪಿ ನಂಜುಂಡಿ ಮಾತುಕತೆ ನಡೆಸಿದ್ದರು. ಈ ವೇಳೆಯಲ್ಲಿ ಅವರು ಕಾಂಗ್ರೆಸ್ ಪಕ್ಷ ಸೇರ್ಪಡೆಗೆ ಗ್ರೀನ್ ಸಿಗ್ನಲ್ ನೀಡಿರೋದಾಗಿ ತಿಳಿದು ಬಂದಿದೆ.

ಈ ಹಿನ್ನಲೆಯಲ್ಲಿ ಇಂದು ಕಾಂಗ್ರೆಸ್ ಕಚೇರಿಯಲ್ಲಿ ಸಿಎಂ ಸಿದ್ಧರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್ ಸೇರಿದಂತೆ ವಿವಿಧ ಕಾಂಗ್ರೆಸ್ ನಾಯಕರ ಸಮ್ಮುಖದಲ್ಲಿ ಕಮಲ ತೊರೆದು, ಅಧಿಕೃತವಾಗಿ ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ.

Share.
Exit mobile version