ಬೆಂಗಳೂರು : ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಸಿಬ್ಬಂದಿಗಳ ಕಿರುಕುಳಕ್ಕೆ ಬೇಸತ್ತು ಜನರು ಸರಣಿ ಆತ್ಮಹತ್ಯೆ ಮಾಡಿಕೊಂಡಂತಹ ಪ್ರಕರಣಗಳು ನಡೆದಿದ್ದವು. ಇದೀಗ ಮೈಕ್ರೋ ಫೈನಾನ್ಸ್ ಗಳ ಕಡಿವಾಣಕ್ಕೆ ಸುಗ್ರೀವಾಜ್ಞೆ ಜಾರಿಗೆ ತರಲು ಸಿಎಂ ಸಿದ್ದರಾಮಯ್ಯ ನೇತೃತ್ವದ ಸಂಪುಟ ಸಭೆ ಅಸ್ತು ಎಂದಿದೆ.
ಹೌದು ಫೈನಾನ್ಸ್ ಗಳ ಕಡಿವಾಡಕ್ಕೆ ಸುಗ್ರೀವಾಜ್ಞೆ ಜಾರಿಗೆ ತರಲು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಇಂದು ಬೆಂಗಳೂರಿನ ಗೃಹ ಕಚೇರಿ ಕೃಷ್ಣದಲ್ಲಿ ಮಹತ್ವದ ಸಭೆ ನಡೆದಿತ್ತು. ಸುಗ್ರೀವಾಜ್ಞೆ ಜಾರಿಗೆ ರಾಜ್ಯಪಾಲರ ಬಳಿ ಅಂಕಿತ ಪಡೆಯಲು ಸಂಪುಟ ಸಭೆ ನಿರ್ಧಾರ ಮಾಡಿದ್ದು, ಹಾಗಾಗಿ ಸುಗ್ರೀವಾಜ್ಞೆ ಜಾರಿ ಮಾಡಲು ಇದೀಗ ರಾಜ್ಯ ಸಚಿವ ಸಂಪುಟ ಒಪ್ಪಿಗೆ ನೀಡಿದೆ.