ಬೆಂಗಳೂರು : ಇಂದು ಬೆಂಗಳೂರಿನ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ರಾಜ್ಯ ಸಚಿವ ಸಂಪುಟ ನಡೆಯಿತು. ಈ ಒಂದು ಸಂಪುಟ ಸಭೆಯಲ್ಲಿ ಸುಮಾರು 35 ವಿಷಯಗಳ ಕುರಿತು ಚರ್ಚಿಸಲಾಯಿತು. ಇದೇ ವೇಳೆ ಬಹು ಮಹತ್ವದ ಜಾತಿಗಣತಿ ವರದಿ ಕುರಿತಂತೆ ಮುಂದಿನ ಕ್ಯಾಬಿನೆಟ್ ಸಭೆಯಲ್ಲಿ ಈ ವರದಿಗೆ ಸಂಬಂಧಪಟ್ಟಂತಹ ಮುಟ್ಟಿದ ಲಕೋಟೆಯನ್ನು ತೆರೆಯಲು ಸಂಪುಟ ಇದೆ ವೇಳೆ ನಿರ್ಧರಿಸಿದೆ.
ಹೌದು ಇಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಬಹುನಿರೀಕ್ಷಿತ ಜಾತಿ ಗಣತಿ ವರದಿ ಬಗ್ಗೆ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ. ಜಾತಿಗಣತಿ ವರದಿ ಮುಚ್ಚಿದ ಲಕೋಟೆಯಲ್ಲಿರುವುದನ್ನು ತೆರೆಯಲು ತೀರ್ಮಾನಸಲಾಗಿದೆ. ಮುಂದಿನ ಸಚಿವ ಸಂಪುಟದ ಸಭೆಯಲ್ಲಿ ಮುಂದಿಡಲು ನಿರ್ಧರಿಸಲಾಗಿದೆ. ಆ ಮೂಲಕ ಕರ್ನಾಟಕವೇ ಎದುರು ನೋಡುತ್ತಿದ್ದ ಜಾತಿಗಣತಿ ವರದಿ ಬಗ್ಗೆ ಸಿದ್ದರಾಮಯ್ಯ ಸರ್ಕಾರದ ಮಹತ್ವದ ಹೆಜ್ಜೆ ಇಟ್ಟಿದೆ.
ಇಂದಿನ ಸಚಿವ ಸಂಪುಟದಲ್ಲೇ ಜಾರಿಗಣತಿ ವರದಿ ಮಂಡನೆಯಾಗಲಿದೆ ಎನ್ನುವ ಚರ್ಚೆಗಳು ನಡೆದಿದ್ದವು. ಆದ್ರೆ, ಈ ಸಚಿವ ಸಂಪುಟದಲ್ಲಿ ಜಾತಿ ಗಣತಿ ವರದಿ ಬಗ್ಗೆ ಚರ್ಚೆ ಮಾಡುವುದಿಲ್ಲ. ಬದಲಾಗಿ ಮುಂದಿನ ಸಚಿವ ಸಂಪುಟದ ಮುಂದೆ ಇಡಲಾಗುವುದು ಎಂದು ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದರು. ಅದರಂತೆ ಇಂದಿನ ಸಚಿವ ಸಂಪುಟದಲ್ಲಿ ಈ ಬಗ್ಗೆ ಮಹತ್ವದ ತೀರ್ಮಾನ ಕೈಗೊಂಡಿದೆ.