ಬೆಂಗಳೂರು : ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಹಲವು ಮಹತ್ವದ ನಿರ್ಧಾರಗಳನ್ನ ತೆಗೆದುಕೊಂಡಿದ್ದು, ಪರಿಶಿಷ್ಟ ಜಾತಿಗೆ(SC) ಒಳ ಮೀಸಲಾತಿ ಕಲ್ಪಿಸುವ ನ್ಯಾ.ಸದಾಶಿವ ಆಯೋಗದ ವರದಿ ಜಾರಿಗೆ ರಾಜ್ಯ ಸರ್ಕಾರ ಮುಂದಾಗಿದೆ. ಇನ್ನು ಈ ಕುರಿತು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಲು ಸಜ್ಜಾಗಿದೆ.
ಪರಿಶಿಷ್ಟ ಜಾತಿಯಲ್ಲಿರುವ ವಿವಿಧ ಸಮುದಾಗಳಿಗೆ ಒಳ ಮೀಸಲಾತಿ ಕಲ್ಪಿಸಲು ಸಂವಿಧಾನಕ್ಕೆ ತಿದ್ದುಪಡಿ ತರುವಂತೆ ಕೇಂದ್ರಕ್ಕೆ ಶಿಫಾರಸು ಮಾಡಲು ಒಪ್ಪಿಗೆ ಸೂಚಿಸಲಾಗಿದೆ.
ಈ ಕುರಿತು ಮಾಹಿತಿ ನೀಡಿದ ಸಚಿವ ಎಚ್.ಕೆ ಪಾಟೀಲ್ ಹಾಗೂ ಎಚ್ಸಿ ಮಹಾದೇವಪ್ಪ, “ಪರಿಶಿಷ್ಟ ಜಾತಿಗೆ ಒಳ ಮೀಸಲಾತಿ ಕಲ್ಪಿಸುವ ಕುರಿತು ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡುತ್ತೇವೆ. ಇನ್ನು ಹೊಸ ಜನಗಣತಿ ಪ್ರಕಾರ ಮೀಸಲಾತಿ ಪರಿಷ್ಕರಿಸಲು ಸಂವಿಧಾನಬದ್ಧವಾಗಿ ರಾಜ್ಯಗಳಿಗೆ ಅಧಿಕಾರ ನೀಡುವಂತೆ ಮತ್ತು ಒಳ ಮೀಸಲಾತಿಗಾಗಿ ಸಂವಿಧಾನದ ಅನುಚ್ಛೇದ 341ಕ್ಕೆ ತಿದ್ದುಪಡಿ ತರುವಂತೆ ಕೇಂದ್ರಕ್ಕೆ ಶಿಫಾರಸು ಮಾಡಲು ನಿರ್ಧರಿಸಲಾಗಿದೆ” ಎಂದು ಹೇಳಿದರು.
ಮೊಸರಿಗೆ ಸಕ್ಕರೆ ಹಾಕಿ ತಿಂದರೆ ಆರೋಗ್ಯಕ್ಕೆ ತುಂಬಾ ಪ್ರಯೋಜನಗಳಿವೆ… ಯಾವುವು…?
BREAKING : ರಾಜ್ಯ ಸರ್ಕಾರ ಮಹತ್ವದ ನಿರ್ಧಾರ : ಶೇ.10 ಬದಲು 10 ಯೂನಿಟ್ ‘ಉಚಿತ ವಿದ್ಯುತ್’ ನೀಡಲು ‘ಸಂಪುಟ’ ಅಸ್ತು