ಬೆಂಗಳೂರು : ಶೀಘ್ರದಲ್ಲಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ, ರಣಧೀಪ್ ಸಿಂಗ್ ಸುರ್ಜೆವಾಲಾ ಬದಲಾವಣೆ ಸಾಧ್ಯತೆ ಇದೆ ಎಂದು ಬಲ್ಲ ಮೂಲಗಳಿಂದ ತಿಳಿದುಬಂದಿದೆ.
ಹೌದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ಸ್ಥಾನದಿಂದ ಬಿಡುಗಡೆಗೊಳಿಸುವಂತೆ ಸುರ್ಜೆವಾಲ ಕೂಡ ಮನವಿ ಮಾಡಿದ್ದಾರೆ ಎನ್ನಲಾಗಿದೆ. ಕೆಲ ತಿಂಗಳ ಹಿಂದೆಯೇ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲ ಮನವಿ ಮಾಡಿದ್ದರು.
ಹರಿಯಾಣ ಕಾಂಗ್ರೆಸ್ ರಾಜ್ಯಾಧ್ಯಕ್ಷ ಸ್ಥಾನದ ಮೇಲೆ ಸುರ್ಜೆವಾಲ ಕಣ್ಣಿಟ್ಟಿದ್ದಾರೆ. ಹಾಗಾಗಿ ರಾಜ್ಯದ ಉಸ್ತುವಾರಿಯಿಂದ ಬಿಡುಗಡೆಗೊಳಿಸುವಂತೆ ಮನವಿ ಮಾಡಿದ್ದು ಸುರ್ಜೆವಾಲ ಸ್ಥಾನಕ್ಕೆ ಛತ್ತಿಸ್ಗಡ್ ಮಾಜಿ ಮುಖ್ಯಮಂತ್ರಿ ರೂಪೇಶ್ ಬಘೇಲ್ ನೇಮಕ ಆಗುವ ಸಾಧ್ಯತೆ ಇದೆ ಎನ್ನಲಾಗಿದೆ.